¶ ‹“ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ, ತೊಡಕುಗಳು ಬರುವುದು ಅನಿವಾರ್ಯ, ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ.›
TSK
TSK · ಲೂಕನು 17:1
Treasury of Scripture Knowledge references in ಕನ್ನಡ IRV.
ದೇವರು ಕಟ್ಟಿದ್ದನ್ನು ನೀನು ಆಹಾರದ ನಿಮಿತ್ತವಾಗಿ ಕೆಡವಬೇಡ. ಎಲ್ಲಾ ಪದಾರ್ಥಗಳೂ ಶುದ್ಧವೇ; ಆದರೆ ತಿಂದು ಮತ್ತೊಬ್ಬರಿಗೆ ವಿಘ್ನವನ್ನುಂಟುಮಾಡುವುದು ಕೆಟ್ಟದ್ದು.
ಆದ್ದರಿಂದ ಆಹಾರಪದಾರ್ಥವು ನನ್ನ ಸಹೋದರನಿಗೆ ಅಡ್ಡಿಯಾಗುವುದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ; ನಾನು ನನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವುದಿಲ್ಲಾ.
ನಿಮ್ಮಲ್ಲಿ ಕೆಲವರು ಯೋಗ್ಯರೆಂದು ಕಂಡುಬರುವುದಕ್ಕಾಗಿ ಭಿನ್ನಾಭಿಪ್ರಾಯಗಳು ಇರುವುದು ಅವಶ್ಯವೇ.
‹ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ.›‹ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ›‹ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು›‹ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.›
ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವುದರಿಂದ ಭೂನಿವಾಸಿಗಳನ್ನು ಮರಳುಗೊಳಿಸಿತ್ತು. ಅವರಿಗೆ, ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸಿತು.