TSK

TSK · ಲೂಕನು 17:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ಕುಷ್ಠರೋಗಿಗಳನ್ನು, ಸಾಂಕ್ರಾಮಿಕವಾದ ಚರ್ಮರೋಗ ಇರುವವರನ್ನು, ಮೇಹಸ್ರಾವವುಳ್ಳವರನ್ನು ಹಾಗು ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.

ನಾಮಾನನ ಕುಷ್ಠವು ನಿನ್ನನ್ನೂ, ನಿನ್ನ ಸಂತಾನದವರನ್ನೂ ಸದಾಕಾಲ ಹಿಡಿದಿರುವುದು” ಎಂದನು. ಕೂಡಲೆ ಅವನಿಗೆ ಕುಷ್ಠ ಹತ್ತಿತು. ಗೇಹಜಿ ಹಿಮದಂತೆ ಬಿಳುಪಾಗಿ ಎಲೀಷನ ಸನ್ನಿಧಿಯಿಂದ ಹೊರಟುಹೋದನು.

ಮಹಾಯಾಜಕನಾದ ಅಜರ್ಯನೂ ಎಲ್ಲಾ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ, ಅವನ ಹಣೆಯಲ್ಲಿ ಕುಷ್ಠವು ಕಂಡುಬಂದ ಕಾರಣ, ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಡಿಸಿದರು. ಯೆಹೋವನು ತನ್ನನ್ನು ಬಾಧಿಸಿದ್ದಾನೆಂದು ಅವನಿಗೆ ತಿಳಿಯಿತು. ಅವನೂ ಶೀಘ್ರವಾಗಿ ಹೊರಗೆ ಹೋಗಲು ಆತುರಪಟ್ಟನು.

‹ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು.›