‹“ಮದುವೆಯ ಅತಿಥಿಗಳು ತಮ್ಮ ಸಂಗಡ ಮದಲಿಂಗನು ಇರುವ ತನಕ ದುಃಖಪಡುವರೇ? ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡುಹೋಗುವ ಕಾಲ ಬರುತ್ತದೆ; ಆಗ ಅವರು ಉಪವಾಸಮಾಡುವರು. ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ; ಹಾಗೆ ಹಚ್ಚಿದರೆ›
TSK
TSK · ಲೂಕನು 17:22
Treasury of Scripture Knowledge references in ಕನ್ನಡ IRV.
‹ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಳ್ಳಲ್ಪಡುವ ಕಾಲ ಬರುತ್ತದೆ. ಆ ಕಾಲದಲ್ಲೆ ಅವರು ಉಪವಾಸಮಾಡುವರು”› ಎಂದು ಉತ್ತರಕೊಟ್ಟನು.
ಆಗ ಯೇಸು ಅವರಿಗೆ ‹“ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟು ಹೋಗುತ್ತೇನೆ.›
ಆಗ ಯೇಸು ಅವರಿಗೆ, ‹“ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.›
¶ ‹“ಆದರೆ ಈಗ ನಾನು ನನ್ನನ್ನು ಕಳುಹಿಸಿಕೊಟ್ಟಾತನ ಬಳಿಗೆ ಹೋಗುತ್ತೇನೆ. ‘ನೀನು ಎಲ್ಲಿಗೆ ಹೋಗುತ್ತಿ?’ ಎಂದು ನಿಮ್ಮಲ್ಲಿ ಒಬ್ಬನಾದರೂ ನನ್ನನ್ನು ಕೇಳುವುದಿಲ್ಲ.›
‹ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ,›‹ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು.›