ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವುದಾದರೆ, ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು.
TSK
TSK · ಲೂಕನು 18:10
Treasury of Scripture Knowledge references in ಕನ್ನಡ IRV.
¶ ಹಿಜ್ಕೀಯನು ಯೆಶಾಯನಿಗೆ, “ಯೆಹೋವನು ನನ್ನನ್ನು ಗುಣಪಡಿಸುವನೆಂಬುವುದಕ್ಕೂ, ನಾನು ಮೂರನೆಯ ದಿನ ಆತನ ಆಲಯಕ್ಕೆ ಹೋಗುವೆನೆಂಬುವುದಕ್ಕೂ, ಇರುವ ಗುರುತು ಏನು?” ಎಂದು ಕೇಳಿದನು.
ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವುದಕ್ಕೆ ಯಾಜಕರ ಪದ್ಧತಿಯ ಪ್ರಕಾರ ಚೀಟು ಹಾಕಲು ಅದು ಅವನ ಪಾಲಿಗೆ ಬಂದಿತು.
‹“‘ನನ್ನ ಆಲಯವು ಪ್ರಾರ್ಥನಾಲಯವಾಗಿರುವುದು’ ಎಂದು ಬರೆಯಲ್ಪಟ್ಟಿದೆಯಲ್ಲಾ, ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ”› ಎಂದು ಹೇಳಿ ಅವರನ್ನು ಹೊರಗೆ ಅಟ್ಟಿದನು.
¶ ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ, ಒಂದು ಪಾಲು ಫರಿಸಾಯರೂ, ಇರುವುದನ್ನು ಪೌಲನು ಕಂಡು; “ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು; ಸತ್ತವರು ಪುನರುತ್ಥಾನಹೊಂದುವರು ಎಂಬ ನಿರೀಕ್ಷೆಯ ನಿಮಿತ್ತವಾಗಿ ನಾನು ವಿಚಾರಣೆಮಾಡಲ್ಪಡುತ್ತಿದ್ದಾನೆ” ಎಂದು ಕೂಗಿದನು.
ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು, ನಾನು ಇಸ್ರಾಯೇಲ್ ವಂಶದವನು, ಬೆನ್ಯಾಮೀನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು, ಧರ್ಮಶಾಸ್ತ್ರಗಳ ದೃಷ್ಟಿಯಿಂದ ನೋಡಿದರೆ ನಾನು ಫರಿಸಾಯನು,