ಯೆಹೋವನ ಮಂದಿರದಲ್ಲಿಯೂ, ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆ ಮಾಡುವವರೇ, ಆತನನ್ನು ಕೀರ್ತಿಸಿರಿ.
TSK
TSK · ಲೂಕನು 18:11
Treasury of Scripture Knowledge references in ಕನ್ನಡ IRV.
ಅವರಂತು ದಿನದಿನವೂ ನನ್ನ ದರ್ಶನಕ್ಕಾಗಿ ಬಂದು, ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಹೆಚ್ಚಳಪಡುತ್ತಾರೆ; ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ, ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ.
ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ಅವು ನಿನ್ನನ್ನು ಉದ್ಧರಿಸಲು ಶಕ್ತವಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು ಇವೆ.
ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.
¶ ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?
ಅದಕ್ಕೆ ಅವನು, “ಅವು ಯಾವುವು?” ಎಂದು ಕೇಳಲು ಯೇಸು, ‹“ನರಹತ್ಯ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳು ಸಾಕ್ಷಿ ಹೇಳಬಾರದು.›
‹ಅವರು ವಿಧವೆಯರ ಮನೆಗಳನ್ನು ನುಂಗಿ, ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು”› ಅಂದನು.
ನಾನಂತೂ ಅಪೊಸ್ತಲರಲ್ಲಿ ಕನಿಷ್ಠನು; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ.
ಮತಾಸಕ್ತಿಯನ್ನು ನೋಡಿದರೆ ನಾನು ಕ್ರೈಸ್ತ ಸಭೆಯ ಹಿಂಸಕನು, ಧರ್ಮಶಾಸ್ತ್ರದಲ್ಲಿ ಹೇಳಿರುವ ನೀತಿಯನ್ನು ನೋಡಿದರೆ ನಾನು ನಿರ್ದೋಷಿ.
ಒಂದು ವೇಳೆ ಅದನ್ನು ಬಿಟ್ಟು ನೀವು ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದು ಅಪರಾಧಿಗಳೆಂದು ಧರ್ಮಶಾಸ್ತ್ರದ ಪ್ರಕಾರ ತೀರ್ಮಾನಿಸಲ್ಪಡುತ್ತೀರಿ.