TSK

TSK · ಲೂಕನು 18:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.

ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.

ಯೇಸು ಅವನಿಗೆ, ‹“ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾರೂ ಒಳ್ಳೆಯವರಲ್ಲ.›

ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.

ಹೇಗೆಂದರೆ “ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು.” ಈ ಮೊದಲಾದ ಎಲ್ಲಾ ಕಟ್ಟಳೆಗಳು “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ.

ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, “ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,

¶ ಆದರೂ ಧರ್ಮಶಾಸ್ತ್ರಕ್ಕೆ ಸರಿಯಾಗಿ “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ, ನೀವು ಒಳ್ಳೆಯದನ್ನೇ ಮಾಡುವವರಾಗಿರುವಿರಿ.