TSK

TSK · ಲೂಕನು 19:29

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆರೂಸಲೇಮಿನ ಪೂರ್ವದಿಕ್ಕಿಗೆ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು, ಆ ಗುಡ್ಡವು ಪೂರ್ವದಿಂದ ಪಶ್ಚಿಮದ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವುದು. ಗುಡ್ಡದ ಅರ್ಧಭಾಗವು ಉತ್ತರಕ್ಕೂ, ಅರ್ಧಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.

ಬಳಿಕ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಬಂದು ಅಲ್ಲಿ ರಾತ್ರಿ ಮಲಗಿದನು.

ಆತನು ಪಟ್ಟಣವನ್ನು ಸಮೀಪಿಸಿ ಎಣ್ಣೆಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಬಂದಾಗ ಶಿಷ್ಯರ ಗುಂಪೆಲ್ಲಾ ಸಂತೋಷಪಡುತ್ತಾ ತಾವು ಕಂಡಿದ್ದ ಎಲ್ಲಾ ಮಹತ್ಕಾರ್ಯಗಳ ವಿಷಯದಲ್ಲಿ,

¶ ತರುವಾಯ ಆತನು ಪ್ರತಿದಿನದಂತೆ ಹೊರಟು ಎಣ್ಣೆಮರಗಳ ಗುಡ್ಡಕ್ಕೆ ಹೋದನು. ಶಿಷ್ಯರೂ ಆತನ ಹಿಂದೆ ಹೋದರು.

¶ ಮರುದಿನ ಹಬ್ಬಕ್ಕೆ ಬಂದಿದ್ದ ಜನರ ಗುಂಪು ಯೇಸು ಯೆರೂಸಲೇಮಿಗೆ ಬರುತ್ತಾನೆಂಬ ಸುದ್ದಿ ಕೇಳಿ