¶ ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.
TSK
TSK · ಲೂಕನು 19:47
Treasury of Scripture Knowledge references in ಕನ್ನಡ IRV.
ಅದೇ ಸಮಯದಲ್ಲಿ ಯೇಸು ಗುಂಪಾಗಿ ಕೂಡಿಬಂದಿದ್ದ ಜನರಿಗೆ, ‹“ಕಳ್ಳನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನು ದೊಣ್ಣೆಗಳನ್ನು ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? ನಾನು ಪ್ರತಿದಿನ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲವಲ್ಲಾ;›
¶ ಅವರು ಪುನಃ ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯದ ಆವರಣದಲ್ಲಿ ನಡೆದಾಡುತ್ತಿರಲಾಗಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ ಆತನ ಬಳಿಗೆ ಬಂದು,
¶ ಪಸ್ಕಹಬ್ಬ ಎಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವುದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.
‹ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಒಬ್ಬನಾದರೂ ಆ ಧರ್ಮಶಾಸ್ತ್ರದಂತೆ ನಡೆಯಲಿಲ್ಲ. ನೀವು ನನ್ನನ್ನು ಕೊಲ್ಲುವುದಕ್ಕೆ ಹುಡುಕುವುದೇಕೆ?”› ಎಂದು ಕೇಳಿದನು.
‹ನೀವು ಅಬ್ರಹಾಮನ ಸಂತಾನದವರೆಂದು ನಾನು ಬಲ್ಲೆನು, ಆದರೂ ನನ್ನ ವಾಕ್ಯಕ್ಕೆ ನಿಮ್ಮಲ್ಲಿ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವುದಕ್ಕೆ ನೋಡುತ್ತಿದ್ದೀರಿ.›
ಅವರು ಆ ದಿನದಿಂದ ಆತನನ್ನು ಕೊಲ್ಲುವುದಕ್ಕೆ ಆಲೋಚಿಸುತ್ತಿದ್ದರು.