ಆ ಮೇಲೆ ನಾನು ಕ್ರಯಪತ್ರವನ್ನು ಅಂದರೆ ನಿಯಮ ಮತ್ತು ಷರತ್ತುಗಳಿಂದ ಮುಚ್ಚಿದ್ದ ಪತ್ರವನ್ನೂ ಹಾಗು ಮುಚ್ಚಳದ ಪತ್ರವನ್ನೂ ತೆಗೆದುಕೊಂಡೆನು.
TSK
TSK · ಲೂಕನು 2:27
Treasury of Scripture Knowledge references in ಕನ್ನಡ IRV.
¶ ಮೋಶೆಯ ಧರ್ಮಶಾಸ್ತ್ರದ ಪ್ರಕಾರ ಅವರ ಶುದ್ಧೀಕರಣದ ದಿನಗಳು ಮುಗಿದ ಮೇಲೆ, “ಚೊಚ್ಚಲು ಗಂಡೆಲ್ಲಾ ಕರ್ತನಿಗೆ ಮೀಸಲೆನಿಸಿಕೊಳ್ಳುವುದು” ಎಂದು ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, ಅವರು ಆ ಕೂಸನ್ನು ಕರ್ತನಿಗೆ ಸಮರ್ಪಿಸುವುದಕ್ಕಾಗಿ ಯೆರೂಸಲೇಮಿಗೆ ತೆಗೆದುಕೊಂಡು ಹೋದರು.
ತಂದೆತಾಯಿಗಳು ಆತನನ್ನು ಕಂಡು ಬೆರಗಾದರು; ಮತ್ತು ಆತನ ತಾಯಿಯು, “ಕಂದಾ, ನೀನು ನಮಗೆ ಯಾಕೆ ಹೀಗೆ ಮಾಡಿದಿ? ನಿನ್ನ ತಂದೆಯೂ ನಾನೂ ಎಷ್ಟೋ ತಳಮಳಗೊಂಡು ನಿನ್ನನ್ನು ಹುಡುಕಿ ಬಂದೆವಲ್ಲಾ” ಎಂದು ಹೇಳಲು,
¶ ಯೇಸು ಪವಿತ್ರಾತ್ಮಭರಿತನಾಗಿ ಯೊರ್ದನ್ ಹೊಳೆಯಿಂದ ಹಿಂತಿರುಗಿ ಬಂದು ದೇವರಾತ್ಮನಿಂದ,
ಪೇತ್ರನು ಆ ದರ್ಶನದ ಕುರಿತಾಗಿ ಯೋಚನೆ ಮಾಡುತ್ತಿರಲು ದೇವರಾತ್ಮನು ಅವನಿಗೆ; “ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;
ಮೂಸ್ಯಕ್ಕೆ ಹತ್ತಿರವಾಗಿ ಬಂದಾಗ, ಬಿಥೂನ್ಯಕ್ಕೆ ಹೋಗುವ ಪ್ರಯತ್ನಮಾಡಿದರು. ಅಲ್ಲಿಯೂ ಯೇಸುವಿನ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.
ಆಗ ಅವನು ದೇವರಾತ್ಮವಶನಾದ ನನ್ನನ್ನು ಎತ್ತಿಕೊಂಡು ಮರುಭೂಮಿಗೆ ಹೋದನು. ಅಲ್ಲಿ ನಾನು ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿದ್ದ ಒಬ್ಬ ಸ್ತ್ರೀಯನ್ನು ಕಂಡೆನು. ಆ ಮೃಗದ ಮೈಮೇಲೆಲ್ಲಾ ದೂಷಣೆಗಳಿಂದ ಕೂಡಿದ್ದ ಹೆಸರುಗಳು ತುಂಬಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.