¶ ದೇವದರ್ಶನದ ಗುಡಾರದ ಬಾಗಿಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ದರ್ಪಣಗಳಿಂದ ತಾಮ್ರದ ತೊಟ್ಟಿಯನ್ನೂ, ಅದರ ಪೀಠವನ್ನೂ ಮಾಡಿಸಿದನು.
TSK
TSK · ಲೂಕನು 2:37
Treasury of Scripture Knowledge references in ಕನ್ನಡ IRV.
ನನ್ನ ದೇವರೇ, ಹಗಲಿನಲ್ಲಿ ಮೊರೆಯಿಡುತ್ತೇನೆ; ಪ್ರತ್ಯುತ್ತರವೇ ಇಲ್ಲ; ರಾತ್ರಿಯಲ್ಲಿಯೂ ನನಗೆ ಉಪಶಮನವಿಲ್ಲ.
ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.
ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು, ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಹೊಸ್ತಿಲಲ್ಲಿ ಬಿದ್ದುಕೊಂಡಿರುವುದೇ ಲೇಸು.
ಯೆಹೋವನಿಗೆ ಸ್ತೋತ್ರ! ಯೆಹೋವನ ನಾಮವನ್ನು ಸ್ತುತಿಸಿರಿ. ಯೆಹೋವನ ಸೇವಕರೇ,
ಆಗ ಅವರು ಉಪವಾಸವಿದ್ದು ಪ್ರಾರ್ಥಿಸಿ ಆ ಇಬ್ಬರ ಮೇಲೆ ಹಸ್ತಗಳನ್ನಿಟ್ಟು ಅವರನ್ನು ಕಳುಹಿಸಿಕೊಟ್ಟರು.
ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಆರಾಧಿಸುತ್ತಾ, ಆ ವಾಗ್ದಾನದ ಫಲವನ್ನು ಹೊಂದುವುದಕ್ಕಾಗಿ ನಿರೀಕ್ಷಿಸುತ್ತಾ ಇದ್ದಾರೆ. ಅರಸನೇ, ಅದೇ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು, ನನ್ನ ವಿರುದ್ಧ ದೋಷಾರೋಪಣೆಮಾಡುತ್ತಿದ್ದಾರೆ.
‹ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ›‹ಸ್ತಂಭವಾಗಿ ನಿಲ್ಲಿಸುವೆನು.›‹ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆ›‹ನನ್ನ ದೇವರ ಹೆಸರನ್ನು, ನನ್ನ›‹ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ,›‹ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.›