ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.
TSK
TSK · ಲೂಕನು 20:36
Treasury of Scripture Knowledge references in ಕನ್ನಡ IRV.
‹ಪುನರುತ್ಥಾನವಾದ ಮೇಲೆ ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಅವರು ಇರುತ್ತಾರೆ.›
ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.
¶ ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರವಾಗಿರುವುದು. ಬಿತ್ತುವಂಥದ್ದು ಅಳಿದುಹೊಗುವಂಥದ್ದು. ಪುನರುತ್ಥಾನವಾಗುವಂಥದ್ದು ಅಮರವಾದದ್ದು.
ಕಡೆ ತುತ್ತೂರಿಯ ಧ್ವನಿಯು ಮೊಳಗುವಲ್ಲಿ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರೊಳಗಾಗಿ ನಾವೆಲ್ಲರೂ ಮಾರ್ಪಡುವೆವು. ಹೌದು, ತುತ್ತೂರಿಯು ಮೊಳಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ರೂಪಾಂತರ ಹೊಂದುವೆವು.
¶ ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ದುಃಖಿಸಬಾರದು ಎಂಬುದೇ ನಮ್ಮ ಬಯಕೆ.
¶ ಸಿಂಹಾಸನವು, ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿಮರಿಯು ವಧಿಸಲ್ಪಟಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಏನೆಂದರೆ ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳೇ.
ಮೊದಲನೇಯ ಪುನರುತ್ಥಾನದಲ್ಲಿ ಸೇರಿದವರು ಧನ್ಯರೂ ಮತ್ತು ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರ್ಷ ಆಳುವರು.
ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು.