TSK

TSK · ಲೂಕನು 20:42

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ದಾವೀದನ ಕೊನೆಯ ಮಾತುಗಳು - ಇಷಯನ ಮಗನಾದ ದಾವೀದನು, ಉನ್ನತ ಸ್ಥಾನದಲ್ಲಿ ಸ್ಥಾಪಿಸಲ್ಪಟ್ಟವನು, ಯಾಕೋಬನ ದೇವರಿಂದ ಅಭಿಷೇಕಿಸಲ್ಪಟ್ಟವನೂ, ಇಸ್ರಾಯೇಲ್ಯರ ವರಕವಿಯೂ ಆಗಿರುವವನ ನುಡಿಗಳು:

ಅವರು ಆತನಿಗೆ, “ದಾವೀದನ ಮಗನು” ಎಂದು ಹೇಳಿದರು. ಅದಕ್ಕೆ ಆತನು, ‹“ಹಾಗಾದರೆ, ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಆತನನ್ನು ಕರ್ತನು ಎಂದು ಕರೆದಿದ್ದಾನಲ್ಲಾ, ಅದು ಹೇಗೆ?›

¶ ತರುವಾಯ ಯೇಸು, ‹“ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?”› ಅಂದನು.

ದಾವೀದನು ಸ್ವರ್ಗಾರೋಹಣ ಮಾಡಲಿಲ್ಲವಲ್ಲಾ. ತಾನೇ ಹೇಳುವ ಮಾತೇನಂದರೆ, “‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದ ಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ದೇವರಾದ ಕರ್ತನು ನನ್ನ ಕರ್ತನಿಗೆ ನುಡಿದನು’ ಎಂಬುದೇ.

ಯಾಕೆಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವುದು ಅವಶ್ಯ.

¶ ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ, “ನೀವು ಈ ದಿನ ದೇವರ ಸ್ವರಕ್ಕೆ ಕಿವಿಗೊಡುವುದಾದರೆ,