ಮತ್ತಾಯನು 1:23
TSK
“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”
TSK
Treasury of Scripture Knowledge references in ಕನ್ನಡ IRV.
“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”
ಅದೇನೆಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ.
ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.
¶ ‹“ಯೇಸುವೆಂಬ ನಾನು›‹ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ›‹ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು›‹ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ›‹ಅವನ ಸಂತತಿಯೂ›‹ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”›