TSK

TSK · ಲೂಕನು 21:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, ‹“ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತಲೂ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.›

‹ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರಗಾಲ ಉಂಟಾದಾಗ, ಇಸ್ರಾಯೇಲಿನಲ್ಲೇ ಅನೇಕ ವಿಧವೆಯರು ಇದ್ದದ್ದು ನಿಜ;›

‹ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಕಾರಿಯಾಗಿ ನೇಮಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›

¶ ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನಂದರೆ; “ನಿಜವಾಗಿಯೂ, ದೇವರು ಪಕ್ಷಪಾತಿಯಲ್ಲ,

ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು.