TSK

TSK · ಲೂಕನು 21:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.”

ಯೇಸು ಅವರಿಗೆ ಉತ್ತರವಾಗಿ ಹೇಳಿದ್ದೇನೆಂದರೆ, ‹“ಯಾರೊಬ್ಬರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಿಂದಿರಿ.›

‹ಆಗ ಯಾರಾದರು ನಿಮಗೆ, ‘ಇಗೋ ಕ್ರಿಸ್ತನು ಇಲ್ಲಿದ್ದಾನೆ, ಅಗೋ ಅಲ್ಲಿದ್ದಾನೆ’ ಎಂದು ಹೇಳಿದರೆ ನಂಬಬೇಡಿರಿ.›

¶ ‹“ಆಗ ಯಾರಾದರೂ ನಿಮಗೆ, ಇಗೋ, ಕ್ರಿಸ್ತನು ಇಲ್ಲಿದ್ದಾನೆ! ಅಗೋ, ಆತನು ಅಲ್ಲಿದ್ದಾನೆ! ಎಂದು ಹೇಳಿದರೆ ನಂಬಬೇಡಿರಿ.›

‹ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ ಆದರೂ ನನ್ನನ್ನು ನೀವು ಸ್ವೀಕರಿಸುವುದಿಲ್ಲ. ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ಅವನನ್ನು ನೀವು ಸ್ವೀಕರಿಸುತ್ತೀರಿ.›

ಇದಕ್ಕಿಂತ ಮೊದಲು ಥೈದನು ಎಂಬ ಒಬ್ಬನು ಎದ್ದು ತಾನೊಬ್ಬ ಮಹಾಪುರುಷನೆಂದು ಹೇಳಿಕೊಂಡನು. ಅವನ ಪಕ್ಷಕ್ಕೆ ಸುಮಾರು ನಾನೂರು ಜನರು ಸೇರಿಕೊಂಡರು, ಅವನು ಕೊಲ್ಲಲ್ಪಟ್ಟನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಸಲ್ಪಟ್ಟು ಇಲ್ಲವಾದರು.

ಆದರೆ ಅಂಥವರು ಸುಳ್ಳು ಅಪೊಸ್ತಲರೂ, ಮೋಸಗಾರರಾದ ಕೆಲಸದವರೂ, ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವವರೂ ಆಗಿದ್ದಾರೆ.

¶ ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ, ಯಾಕೆಂದರೆ ಮೊದಲು ನಂಬಿಕೆಯ ಭ್ರಷ್ಟತೆಯುಂಟಾಗಿ ನಾಶನದ ಮಗನಾದ ಅಧರ್ಮ ಪುರುಷನು ಬಯಲಿಗೆ ಬಾರದ ಹೊರತು ಆ ದಿನವು ಬರುವುದಿಲ್ಲ.

ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.

ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ.

ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.