TSK

TSK · ಲೂಕನು 21:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.

ಪಕ್ಕನೆ ಬರುವ ಅಪಾಯಕ್ಕಾಗಲಿ ಅಥವಾ ದುಷ್ಟರಿಗೆ ಸಂಭವಿಸುವ ನಾಶನಕ್ಕಾಗಲಿ ನೀನು ಅಂಜುವುದೇ ಇಲ್ಲ.

ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?

‹ಇದಲ್ಲದೆ ಯುದ್ಧಗಳಾಗುವುದನ್ನೂ ಯುದ್ಧಗಳಾಗುವ ಸೂಚನೆಯ ಸುದ್ದಿಗಳನ್ನೂ ನೀವು ಕೇಳಬಹುದು. ಕಳವಳಪಡದಂತೆ ನೋಡಿಕೊಳ್ಳಿರಿ; ಏಕೆಂದರೆ ಹೀಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.›

ಯೇಸು ಹೇಳಿದ್ದೇನಂದರೆ, ‹“ನೀವು ಮೋಸಹೋಗದಂತೆ ಎಚ್ಚರವಾಗಿರಿ. ಏಕೆಂದರೆ ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು ‘ನಾನೇ ಕ್ರಿಸ್ತನು, ನಾನೇ ಕ್ರಿಸ್ತನು’ ಎಂತಲೂ ‘ಆ ಕಾಲ ಹತ್ತಿರವಾಯಿತು’ ಎಂತಲೂ ಹೇಳುವರು. ಅವರ ಹಿಂದೆ ಹೋಗಬೇಡಿರಿ.›

‹ಆದರೆ ಇವು ಸಂಭವಿಸುವುದಕ್ಕೆ ತೊಡಗುವಾಗ, ನಿಮ್ಮ ತಲೆಯೆತ್ತಿರಿ, ಏಕೆಂದರೆ ನಿಮ್ಮ ಬಿಡುಗಡೆಯು ಸಮೀಪವಾಗಿದೆ”› ಅಂದನು.