TSK

TSK · ಲೂಕನು 22:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಈ ಹೊತ್ತು ನೀನು ನನ್ನನ್ನು ಬಿಟ್ಟುಹೋದ ನಂತರ ಬೆನ್ಯಾಮೀನ್ಯರ ಮೇರೆಯೊಳಗಿರುವ ರಾಹೇಲಳ ಸಮಾಧಿಯ ಬಳಿಯಲ್ಲಿರುವಂಥ ಚೆಲ್ಚಹಿನಲ್ಲಿ ಇಬ್ಬರು ಮನುಷ್ಯರನ್ನು ಕಾಣುವಿ. ಅವರು ನಿನಗೆ, ‘ನೀನು ಹುಡುಕುತ್ತಿರುವ ಕತ್ತೆಗಳು ಸಿಕ್ಕಿದವು; ನಿನ್ನ ತಂದೆಯು ಕತ್ತೆಗಳ ಚಿಂತೆಬಿಟ್ಟು ನನ್ನ ಮಗನು ಎಲ್ಲಿ ಹೋದನು ಎಂಬುದಾಗಿ ನಿನಗೋಸ್ಕರ ಹಂಬಲಿಸುತ್ತಿರುತ್ತಾನೆ’ ಎಂದು ಹೇಳುವರು.

¶ ಅನಂತರ ಆತನು ಎಣ್ಣೆಮರಗಳ ಗುಡ್ಡ ಎನಿಸಿಕೊಳ್ಳುವ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸಮೀಪಿಸಿದಾಗ ಶಿಷ್ಯರಲ್ಲಿ ಇಬ್ಬರನ್ನು ಕರೆದು,

¶ ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣದ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ” ಎಂದು ಹೇಳಿದನು.