TSK

TSK · ಲೂಕನು 22:35

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಲ್ವತ್ತು ವರ್ಷ ಅರಣ್ಯದಲ್ಲಿ ನಡಿಸಿದ್ದನ್ನೂ, ನೀವು ಆತನ ಆಜ್ಞೆಗಳನ್ನು ಕೈಕೊಳ್ಳುತ್ತಿರೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.

ಫರೋಹನು ಅವನನ್ನು, “ನನ್ನ ಬಳಿಯಲ್ಲಿ ನೀನಗೇನು ಕೊರತೆಯಾಯಿತು. ಸ್ವದೇಶಕ್ಕೆ ಹೋಗಬೇಕೆಂದು ಯಾಕೆ ಬಯಸುತ್ತೀ?” ಎಂದು ಕೇಳಿದನು. ಅದಕ್ಕೆ ಹದದನು, “ಏನೂ ಕೊರತೆಯಾಗಿರುವುದಿಲ್ಲ. ಆದರೂ ನನಗೆ ಹೋಗುವುದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಂಡನು.

ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ; ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವುದಿಲ್ಲ.

‹ಹೀಗಿರುವುದರಿಂದ, ‘ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಧರಿಸಿಕೊಳ್ಳಬೇಕು’ ಎಂದು ಚಿಂತೆಮಾಡಬೇಡಿರಿ.›

‹“ಕೋಲು ಹೊರತು ಪ್ರಯಾಣಕ್ಕೆ ಏನೂ ತೆಗೆದುಕೊಂಡು ಹೋಗಬೇಡಿರಿ; ಬುತ್ತಿ, ಚೀಲ, ಸೊಂಟಪಟ್ಟಿಯಲ್ಲಿ ಹಣ ಬೇಡ.›

‹ನೋಡಿರಿ, ನೀವು ಹೋಗುವಾಗ ಹಣದ ಚೀಲವನ್ನಾಗಲಿ, ಪ್ರವಾಸದ ಚೀಲವನ್ನಾಗಲಿ, ಕಾಲಿಗೆ ಕೆರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ದಾರಿಯಲ್ಲಿ ಯಾರಿಗೂ ವಂದಿಸಬೇಡಿರಿ.›

ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಅತಿಯಾಗಿ ಶೇಖರಿಸಿದವನಿಗೆ ಅಧಿಕವಾಗಲಿಲ್ಲ ಮಿತಿಯಾಗಿ ಶೇಖರಿಸಿದವನಿಗೆ ಕೊರತೆಯಾಗಲಿಲ್ಲ.”