ಯಾಬೇಚನು ಇಸ್ರಾಯೇಲಿನ ದೇವರಿಗೆ, “ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ, ನನ್ನ ಪ್ರಾಂತ್ಯವನ್ನು ವಿಸ್ತರಿಸಿ, ನಿನ್ನ ಕೃಪಾಹಸ್ತದಲ್ಲಿ ನನ್ನನ್ನು ಇರಿಸಿ ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ಕೇಡಿನಿಂದ ರಕ್ಷಿಸಬಾರದೇ?” ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.
TSK
TSK · ಲೂಕನು 22:40
Treasury of Scripture Knowledge references in ಕನ್ನಡ IRV.
ಅದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು. ಅಂಥ ಪಾಪಗಳು ನನ್ನನ್ನು ಆಳದಿರಲಿ. ಆಗ ನಾನು ತಪ್ಪಿಲ್ಲದವನಾಗಿ ಮಹಾದ್ರೋಹಕ್ಕೆ ಒಳಗಾಗುವುದಿಲ್ಲ.
ನಿನ್ನ ನುಡಿಗನುಸಾರವಾಗಿ ನನ್ನ ಹೆಜ್ಜೆಯನ್ನು ದೃಢಪಡಿಸು, ಯಾವ ಅನ್ಯಾಯವಾದರೂ ನನ್ನನ್ನು ಆಳದಂತೆ ಮಾಡು.
‹ನಮ್ಮನ್ನು ಶೋಧನೆಯೊಳಗೆ ಸೇರಿಸದೆ› ‹ಕೆಡುಕನಿಂದ; ನಮ್ಮನ್ನು ತಪ್ಪಿಸು›
¶ ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದರು. ಆತನು ತನ್ನ ಶಿಷ್ಯರಿಗೆ, ‹“ನಾನು ಪ್ರಾರ್ಥನೆ ಮಾಡುವ ತನಕ, ನೀವು ಇಲ್ಲೇ ಕುಳಿತುಕೊಂಡಿರಿ”› ಎಂದು ಹೇಳಿದನು.
ಅವರಿಗೆ, ‹“ನೀವು ನಿದ್ರೆಮಾಡುವುದೇನು? ಏಳಿರಿ, ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ”› ಎಂದು ಹೇಳಿದನು.
ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ.
ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.