TSK

TSK · ಲೂಕನು 22:61

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಮನುಷ್ಯರ ಮುಂದೆ ನಿಂತು, ‘ನಾನು ಪಾಪ ಮಾಡಿ ನ್ಯಾಯವನ್ನು ಕೆಡಿಸಿದ್ದರೂ, ಆತನು ಮುಯ್ಯಿತೀರಿಸಲಿಲ್ಲ.

ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವುದನ್ನು ಕೇಳಿದ್ದೇನೆ, ‘ನೀನು ನನ್ನನ್ನು ಶಿಕ್ಷಿಸಿದ್ದಿ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು. ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.

ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.”

ಯೇಸು ಪೇತ್ರನಿಗೆ, ‹“ನಿನಗೆ ಸತ್ಯವಾಗಿ ಹೇಳುತ್ತೇನೆ, ಇದೇ ರಾತ್ರಿಯಲ್ಲಿ ಕೋಳಿ ಕೂಗುವುದಕ್ಕಿಂತ ಮೊದಲೇ ನೀನು ನನ್ನನ್ನು ಮೂರು ಸಾರಿ ನಿರಾಕರಿಸುವಿ”› ಅಂದನು.

¶ ಆ ಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳಿದುಕೊಂಡು ಗುಂಪಿನಲ್ಲಿ ಹಿಂತಿರುಗಿ, ‹“ನನ್ನ ಉಡುಪನ್ನು ಮುಟ್ಟಿದವರು ಯಾರು?”› ಎಂದು ಕೇಳಲು

ಆದರೆ, ಕರ್ತನು ಆಕೆಗೆ, ‹“ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ.›

ಆಗ ಯೇಸು ಅವನಿಗೆ, ‹“ನೀನು ನನಗಾಗಿ ಪ್ರಾಣವನ್ನೇ ಕೊಡುವೆಯಾ? ನಿನಗೆ ನಿಜನಿಜವಾಗಿ ಹೇಳುತ್ತೇನೆ: ನೀನು ನನ್ನನ್ನು ಮೂರು ಸಾರಿ ನಿರಾಕರಿಸುವ ತನಕ ಕೋಳಿಯು ಕೂಗುವುದೇ ಇಲ್ಲ”› ಎಂದನು.

¶ ಆದಕಾರಣ ಹಿಂದೊಮ್ಮೆ ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ. ಶರೀರದಲ್ಲಿ ಮನುಷ್ಯನಿಂದ ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರೆನ್ನಿಸಿಕೊಳ್ಳುವವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ.