ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.
TSK
TSK · ಲೂಕನು 23:4
Treasury of Scripture Knowledge references in ಕನ್ನಡ IRV.
ಪಿಲಾತನು, “ಏಕೆ? ಇವನು ಏನು ಅಪರಾಧ ಮಾಡಿದ್ದಾನೆ?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಇನ್ನೂ ಹೆಚ್ಚಾಗಿ ಆರ್ಭಟಿಸಿ ಕೂಗಿಕೊಂಡರು.
¶ ಅವನು ಮೂರನೆಯ ಸಾರಿ, “ಯಾಕೆ? ಕೆಟ್ಟದ್ದೇನು ಮಾಡಿದನು? ನಾನು ಇವನಲ್ಲಿ ಮರಣದಂಡನೆಗೆ ತಕ್ಕ ಅಪರಾಧವೇನೂ ಕಾಣಲಿಲ್ಲ ಆದುದರಿಂದ ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ” ಎಂದು ಅವರಿಗೆ ಹೇಳಿದನು.
ತರುವಾಯ ಪಿಲಾತನು ಪುನಃ ಹೊರಗೆ ಹೋಗಿ ಯೆಹೂದ್ಯರಿಗೆ, “ನನಗೆ ಅವನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲವೆಂಬುದು ನಿಮಗೆ ತಿಳಿಯುವಂತೆ ಅವನನ್ನು ನಿಮ್ಮ ಬಳಿಗೆ ತರುತ್ತೇನೆ ನೋಡಿರಿ” ಎಂದು ಹೇಳಿದನು.
ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.