ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.
TSK
TSK · ಲೂಕನು 3:1
Treasury of Scripture Knowledge references in ಕನ್ನಡ IRV.
ಹೆರೋದನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು.
¶ ಹೆರೋದನು ತಾನೇ ಕಳುಹಿಸಿ ಯೋಹಾನನನ್ನು ಹಿಡಿದು ಬಂಧಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳ ನಿಮಿತ್ತ ಹಾಗೆ ಮಾಡಿದ್ದನು; ಏಕೆಂದರೆ ಅವನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಮದುವೆಯಾಗಿದ್ದನು.
ಆದರೆ ಉಪರಾಜನಾದ ಹೆರೋದನು ತನ್ನ ಅಣ್ಣನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿಯೂ, ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ನಿಮಿತ್ತವಾಗಿಯೂ ಯೋಹಾನನಿಂದ ಗದರಿಸಲ್ಪಟ್ಟಿದರಿಂದ,
¶ ಅಲ್ಲಿ ಕೂಡಿದ್ದವರೆಲ್ಲರೂ ಎದ್ದು ಆತನನ್ನು ಪಿಲಾತನ ಬಳಿಗೆ ಕರೆದುಕೊಂಡು ಹೋಗಿ,
ಆಗ ಪಿಲಾತನು, ಅವರು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿ,
¶ “ಮಹಾರಾಜರಾಜಶ್ರೀ ದೇಶಾಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.
¶ ಆ ಮೇಲೆ ರಾಜನೂ, ದೇಶಾಧಿಪತಿಯೂ ಮತ್ತು ಬೆರ್ನಿಕೆಯೂ ಅವರ ಸಂಗಡ ಕುಳಿತಿದ್ದವರೂ, ಎದ್ದು ಹೊರಗೆ ಹೋಗಿ;