¶ ಯೋಸೇಫನು ಐಗುಪ್ತ ದೇಶದ ಅರಸನಾದ ಫರೋಹನ ಸನ್ನಿಧಿಯಲ್ಲಿ ನಿಂತಾಗ ಮೂವತ್ತು ವರ್ಷದವನಾಗಿದ್ದನು. ಅವನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶದಲ್ಲೆಲ್ಲಾ ಸಂಚಾರಮಾಡಿದನು.
TSK
TSK · ಲೂಕನು 3:23
Treasury of Scripture Knowledge references in ಕನ್ನಡ IRV.
ಅವರು ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳ ದೇವದರ್ಶನದ ಗುಡಾರದ ಸೇವೆ ಮಾಡಲು ಯೋಗ್ಯರಾದವರನ್ನು ಎಣಿಕೆಮಾಡಿದರು.
ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಎಣಿಕೆ ಮಾಡಿದರು.
¶ ಅಬ್ರಹಾಮನ ಮಗನಾದ ದಾವೀದನ ಕುಮಾರನಾದ ಯೇಸು ಕ್ರಿಸ್ತನ ವಂಶಾವಳಿ.
ಯಾಕೋಬನ ಮಗನು ಯೋಸೇಫನು. ಯೋಸೇಫನು ಮರಿಯಳ ಗಂಡನು. ಈ ಮರಿಯಳಿಂದಲೇ ಕ್ರಿಸ್ತನೆಂಬ ಯೇಸು ಹುಟ್ಟಿದನು.
ಇವನು ಆ ಬಡಗಿಯ ಮಗನಲ್ಲವೇ? ಇವನ ತಾಯಿ ಮರಿಯಳೆಂಬುವವಳಲ್ಲವೇ? ಯಾಕೋಬ, ಯೋಸೇಫ, ಸೀಮೋನ, ಯೂದ ಇವರು ಇವನ ತಮ್ಮಂದಿರಲ್ಲವೇ?
¶ ಯೇಸು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದಾಗ ಸುಮಾರು ಮೂವತ್ತು ವರ್ಷದವನಾಗಿದ್ದನು. ಆತನು ಜನರ ಎಣಿಕೆಯಲ್ಲಿ ಯೋಸೇಫನ ಮಗನು. ಯೋಸೇಫನು ಹೇಲಿಯನ ಮಗನು;
ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.
¶ ಥೆಯೊಫಿಲನೇ, ನಾನು ಮೊದಲು ಬರೆದ ಪುಸ್ತಕದಲ್ಲಿ, ಯೇಸು ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಪವಿತ್ರಾತ್ಮನ ಮೂಲಕ ಅಪ್ಪಣೆಕೊಟ್ಟು,