ಕೀರ್ತನೆಗಳು 98:2
TSK
ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ.
TSK
Treasury of Scripture Knowledge references in ಕನ್ನಡ IRV.
ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ.
ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”
ಆ ಮೇಲೆ ಅವರಿಗೆ, ‹“ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.›
ನೀನು ಎಲ್ಲಾ ಜನರ ಸಮ್ಮುಖದಲ್ಲಿ ಸಿದ್ಧಪಡಿಸಿದ ಆ ರಕ್ಷಣೆಯನ್ನು ನಾನು ಕಣ್ಣಾರೆ ಕಂಡೆನು.
ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. “ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.”