¶ ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
TSK
TSK · ಲೂಕನು 4:15
Treasury of Scripture Knowledge references in ಕನ್ನಡ IRV.
ಮತ್ತಾಯನು 4:23
TSK
ಮತ್ತಾಯನು 9:35
TSK
¶ ತರುವಾಯ ಯೇಸು ಎಲ್ಲಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
ಮಾರ್ಕನು 1:27
TSK
ಜನರೆಲ್ಲರೂ ಬೆರಗಾಗಿ, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ದೆವ್ವಗಳಿಗೂ ಸಹ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ವಿಚಾರಮಾಡಿಕೊಂಡರು.
ಮಾರ್ಕನು 1:45
TSK
ಆದರೆ ಅವನು ಹೊರಟುಹೋಗಿ ಎಲ್ಲಾ ಕಡೆಗೂ ಈ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸುವುದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಬಹಿರಂಗವಾಗಿ ಬೇರೆ ಊರುಗಳಿಗೆ ಹೋಗಲಾರದೆ ನಿರ್ಜನ ಸ್ಥಳಗಳಲ್ಲಿ ಇದ್ದನು. ಆದರೂ ಜನರು ಎಲ್ಲಾ ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.
ಲೂಕನು 13:10
TSK
¶ ಒಂದು ಸಬ್ಬತ್ ದಿನದಲ್ಲಿ ಯೇಸು ಒಂದು ಸಭಾಮಂದಿರದೊಳಗೆ ಉಪದೇಶಮಾಡುತ್ತಾ ಇದ್ದನು.