ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು, ಆತನ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.
TSK
TSK · ಲೂಕನು 4:8
Treasury of Scripture Knowledge references in ಕನ್ನಡ IRV.
ಹಿಜ್ಕೀಯನು ಯೆಹೋವನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲರ ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕಭೂಲೋಕಗಳನ್ನು ಉಂಟುಮಾಡಿದವನು ನೀನೇ.
ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.
ಆತನು ತಿರುಗಿಕೊಂಡು ಪೇತ್ರನಿಗೆ, ‹“ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು. ನನಗೆ ನೀನು ಅಡ್ಡಿಯಾಗಿದ್ದಿ, ಏಕೆಂದರೆ ನೀನು ದೇವರ ವಿಷಯಗಳ ಬಗ್ಗೆ ಯೋಚಿಸದೇ ಮನುಷ್ಯರ ವಿಷಯಗಳ ಬಗ್ಗೆ ಯೋಚಿಸುತ್ತೀ”› ಎಂದು ಹೇಳಿದನು.
ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು.
¶ ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು.