TSK

TSK · ಲೂಕನು 5:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ಒಬ್ಬ ಮನುಷ್ಯನ ಮೈಮೇಲೆ ಬಾವಾಗಲಿ, ಗುಳ್ಳೆಯಾಗಲಿ ಅಥವಾ ಹೊಳೆಯುವ ಮಚ್ಚೆಯಾಗಲಿ ಉಂಟಾಗಿ ಅದರಲ್ಲಿ ಕುಷ್ಠರೋಗದ ಲಕ್ಷಣಗಳು ತೋರಿದರೆ ಅವನನ್ನು ಮಹಾಯಾಜಕನಾದ ಆರೋನನ ಬಳಿಗೆ ಇಲ್ಲವೆ ಆರೋನನ ಮಕ್ಕಳಾದ ಯಾಜಕರಲ್ಲಿ ಒಬ್ಬನ ಬಳಿಗೆ ಕರೆದುಕೊಂಡು ಬರಬೇಕು.

ಆಗ ಯೇಸು ಅವನಿಗೆ; ‹“ನೋಡು, ಯಾರಿಗೂ ಹೇಳಬೇಡ;›‹ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇಮಿಸಿದ ಕಾಣಿಕೆಯನ್ನು ಕೊಡು;”›‹ಅದು ಅವರಿಗೆ ಸಾಕ್ಷಿಯಾಗಲಿ› ಎಂದು ಹೇಳಿದನು.

‹ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ.›

‹ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ನಿನ್ನ ಶುದ್ಧಿಗಾಗಿ›‹ಮೋಶೆಯು ಆಜ್ಞಾಪಿಸಿರುವಂಥವುಗಳನ್ನು ಅರ್ಪಿಸು. ಅದು ಜನರಿಗೆ ಸಾಕ್ಷಿಯಾಗಿರಲಿ ಎಂದು ಖಂಡಿತವಾಗಿ”› ಹೇಳಿ ಅವನನ್ನು ಕೂಡಲೆ ಕಳುಹಿಸಿ ಬಿಟ್ಟನು.

‹ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟುಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ”› ಅಂದನು.