TSK

TSK · ಲೂಕನು 5:38

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.

ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.

ಈಗಲಾದರೋ ನೀವು ದೇವರನ್ನು ತಿಳಿದುಕೊಂಡಿದ್ದೀರಿ, ಅಥವಾ ದೇವರು ನಿಮ್ಮನ್ನು ತಿಳಿದುಕೊಂಡಿದ್ದಾನೆ. ಹೀಗಿರಲಾಗಿ ನೀವು ಬಲವಿಲ್ಲದ, ಕೆಲಸಕ್ಕೆ ಬಾರದ, ದರಿದ್ರವಾದ ಮೂಲತತ್ವಗಳಿಗೆ ಹಿಂತಿರುಗಿ ಅದಕ್ಕೆ ದಾಸರಾಗುವುದಕ್ಕೆ ಏಕೆ ಬಯಸುತ್ತೀರಿ?

ಸುನ್ನತಿ ಮಾಡಿಸಿಕೊಂಡವರೇ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತಿಲ್ಲವಲ್ಲಾ. ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳಪಡುವುದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.

ಇಂಥವನು ಕ್ರಿಸ್ತನೆಂಬ ತಲೆಯೊಂದಿಗೆ ಸಂಬಂಧ ಕಳೆದುಕೊಂಡವನಾಗಿದ್ದಾನೆ, ತಲೆಯಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಪೋಷಣೆಯನ್ನು ಹೊಂದಿ, ಒಂದಾಗಿ ಜೋಡಿಸಲ್ಪಟ್ಟ ದೇಹವಾಗಿ, ದೇವರು ಕೊಡುವ ಅಭಿವೃದ್ಧಿಯಿಂದ ಬೆಳೆಯುತ್ತಾ ಬರುತ್ತದೆ.

ಆದರೆ ದೇವರು ಆ ಜನರಲ್ಲಿ ತಪ್ಪು ಹೊರಿಸಿ ಹೀಗೆಂದನು, “‘ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು’ ಎಂದು ಕರ್ತನು ಹೇಳುತ್ತಾನೆ.

¶ ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಇಗೋ, ನಾನು ಎಲ್ಲವನ್ನು ನೂತನಗೊಳಿಸುತ್ತೇನೆ” ಎಂದನು. ಮತ್ತು ಒಬ್ಬನು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ, ಸತ್ಯವಾದವೂ ಆಗಿವೆ” ಎಂದು ಹೇಳಿದನು.