ಅವರು ಮೋಶೆಗೆ, “ನೀನೇ ನಮ್ಮ ಸಂಗಡ ಮಾತನಾಡು, ನಾವು ಕೇಳುತ್ತೇವೆ. ದೇವರು ನಮ್ಮ ಸಂಗಡ ಮಾತನಾಡಿದರೆ ನಾವು ಸತ್ತು ಹೋಗುತ್ತೇವೆ” ಎಂದು ಹೇಳಿದರು.
TSK
TSK · ಲೂಕನು 5:8
Treasury of Scripture Knowledge references in ಕನ್ನಡ IRV.
¶ ಪರಿಶುದ್ಧ ದೇವರಾದ ಯೆಹೋವನ ಮುಂದೆ ಯಾರು ನಿಂತಾರು? ನಮ್ಮನ್ನು ಬಿಟ್ಟು ಈತನು ಹೋಗತಕ್ಕ ಸ್ಥಳ ಯಾವುದು ಎಂದು ಮಾತನಾಡಿಕೊಂಡು
ಆಗ ಆ ಸ್ತ್ರೀಯು ಎಲೀಯನಿಗೆ, “ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?” ಎಂದಳು.
ಕಿವಿಯಿಂದ ನಿನ್ನ ವಿಷಯವನ್ನು ಕೇಳಿದ್ದೆನು, ಈಗಲಾದರೋ ನಿನ್ನನ್ನೇ ಕಣ್ಣಾರೆ ಕಂಡೆನು.
ಇಗೋ, ನರರೂಪ ಸದೃಶನೊಬ್ಬನು ನನ್ನ ತುಟಿಗಳನ್ನು ಮುಟ್ಟಲು ನಾನು ಬಾಯಿಬಿಟ್ಟು ನನ್ನ ಮುಂದೆ ನಿಂತಿರುವವನಿಗೆ, “ಎನ್ನೊಡೆಯನೇ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಿತ್ರಾಣನಾಗಿದ್ದೇನೆ.
ಆ ಶತಾಧಿಪತಿಯು, “ಕರ್ತನೇ, ನೀನು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನ್ನಲ್ಲಿಲ್ಲ; ನೀನು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು.
ಮರಿಯಳು ಯೇಸು ಇದ್ದಲ್ಲಿಗೆ ಬಂದು ಆತನನ್ನು ಕಂಡು ಆತನ ಪಾದಗಳಿಗೆ ಅಡ್ಡಬಿದ್ದು ಆತನಿಗೆ, “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ” ಎಂದಳು.
ಈಗ ಕನ್ನಡಿಯಲ್ಲಿ ಕಾಣಿಸುವಂತೆ ದೇವರ ಮುಖವು ನಮಗೆ ಮೊಬ್ಬಾಗಿ ಕಾಣಿಸುತ್ತದೆ, ಆದರೆ ಆಗ ನೇರವಾಗಿ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಅಪೂರ್ಣವಾಗಿ ನನಗೆ ತಿಳಿದಿದೆ. ಆದರೆ ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.
¶ ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿದವನೂ ನೋಡಿದವನೂ ಆಗಿದ್ದೇನೆ. ನಾನು ಈ ಸಂಗತಿಗಳನ್ನು ಕೇಳಿ ಕಂಡಾಗ, ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.