TSK

TSK · ಲೂಕನು 6:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯಾಕೋಬನು ಒಂಟಿಯಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.

ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ. ಅವರ ಮನೆಯಲ್ಲಿಯೂ, ಮನಸ್ಸಿನಲ್ಲಿಯೂ ಕೆಟ್ಟತನವೇ ತುಂಬಿದೆ.

¶ ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇಮಿನ ಕಡೆಗೆ ಕದವಿಲ್ಲದೆ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರ ಸಲ್ಲಿಸುತ್ತಿದ್ದನು

ಆತನು ಜನರ ಗುಂಪುಗಳನ್ನು ಕಳುಹಿಸಿಬಿಟ್ಟ ಮೇಲೆ ಪ್ರಾರ್ಥನೆ ಮಾಡುವುದಕ್ಕಾಗಿ ಏಕಾಂಗಿಯಾಗಿ ಬೆಟ್ಟವನ್ನು ಹತ್ತಿದನು. ಮತ್ತು ಸಂಜೆಯಾದಾಗ ಆತನೊಬ್ಬನೇ ಅಲ್ಲಿ ಇದ್ದನು.

ಆತನು ಜನರನ್ನು ಕಳುಹಿಸಿಕೊಟ್ಟ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು.

¶ ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ, ಎಚ್ಚರವಾಗಿದ್ದು ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.