TSK

TSK · ಲೂಕನು 6:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.

¶ ಅವನು ಅದಕ್ಕೆ, “ಸೇನಾಧೀಶ್ವರನಾದ ದೇವರೇ, ಯೆಹೋವನೇ ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ. ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.

ಅಹಾಬನು ಎಲೀಯನನ್ನು ಕಂಡು ಅವನನ್ನು, “ನನ್ನ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ” ಎಂದು ಕೇಳಲು ಅವನು, “ಹೌದು ಕಂಡುಹಿಡಿದ್ದೆನು. ನೀನು ನಿನ್ನನ್ನು ಪಾಪಕ್ಕೆ ಮಾರಿಕೊಂಡು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.

‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.

ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.

ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವುದು, ಅರಣ್ಯದಲ್ಲಿ ಒರತೆಗಳು ಒಡೆಯುವವು, ಮರುಭೂಮಿಯಲ್ಲಿ ನದಿಗಳು ಹುಟ್ಟಿ ಹರಿಯುವವು.

‹ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ.›

‹ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು.›

ಎಲಿಸಬೇತಳು ಮರಿಯಳ ವಂದನೆಯನ್ನು ಕೇಳುತ್ತಲೇ ಆಕೆಯ ಗರ್ಭದಲ್ಲಿದ್ದ ಕೂಸು ಕುಣಿದಾಡಿತು ಮತ್ತು ಎಲಿಸಬೇತಳು ಪವಿತ್ರಾತ್ಮಭರಿತಳಾದಳು.

‹ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.›

ಅಪೊಸ್ತಲರು ತಾವು ಯೇಸುವಿನ ಹೆಸರಿನ ನಿಮಿತ್ತವಾಗಿ ಅವಮಾನಪಡುವುದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಪಟ್ಟರು.

¶ “ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ” ಎಂದು ಮಹಾಧ್ವನಿಯಿಂದ ಹೇಳಿದನು. ಕೂಡಲೆ ಆ ಮನುಷ್ಯನು ಹಾರಿ ನಡೆದಾಡಿದನು.

ಆದ್ದರಿಂದ ಕ್ರಿಸ್ತನ ನಿಮಿತ್ತ ನನಗೆ ಬಲಹೀನತೆಯಲ್ಲಿಯೂ, ತಿರಸ್ಕಾರದಲ್ಲಿಯೂ, ಕೊರತೆಯಲ್ಲಿಯೂ, ಹಿಂಸೆಯಲ್ಲಿಯೂ ಮತ್ತು ಇಕ್ಕಟ್ಟೂ ಸಂಭವಿಸಿದಾಗಲೂ ಸಂತುಷ್ಟನಾಗಿದ್ದೇನೆ. ಯಾಕೆಂದರೆ ನಾನು ಯಾವಾಗ ದುರ್ಬಲನಾಗಿರುವೆನೋ, ಆವಾಗಲೇ ಬಲವುಳ್ಳವನೂ ಆಗಿರುತ್ತೇನೆ.

ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾಗಿದ್ದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.

ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.

ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.

¶ ಇನ್ನೂ ಏನು ಹೇಳಬೇಕು? ಗಿದ್ಯೋನ್, ಬಾರಾಕ ಸಂಸೋನ, ಯೆಪ್ತಾಹ, ದಾವೀದ, ಸಮುವೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.

ಆದರೆ ನೀವು ಎಷ್ಟರ ಮಟ್ಟಿಗೆ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷಪಡಿರಿ. ಆದ್ದರಿಂದ ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ

‹ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ,›‹ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು›‹ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು.›‹ನೀನು ಸಾಯುವ ತನಕ›‹ನಂಬಿಗಸ್ತನಾಗಿರು, ನಾನು ನಿನಗೆ›‹ಜೀವದ ಕಿರೀಟವನ್ನು ಕೊಡುವೆನು.›

‹ಯಾವನು ಜಯಶಾಲಿಯಾಗಿ ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನು›‹ಕಡೆಯವರೆಗೂ ನಡಿಸುತ್ತಾನೋ,›‹ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು.›‹‘ಅವನು›‹ಕಬ್ಬಿಣದ ಕೋಲಿನಿಂದ ಅವರನ್ನು ಆಳುವನು,›‹ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವುದು.’ ಇದಲ್ಲದೆ›‹ಉದಯ ನಕ್ಷತ್ರವನ್ನು ಅವನಿಗೆ ಕೊಡುವೆನು.›

‹ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ›‹ಸ್ತಂಭವಾಗಿ ನಿಲ್ಲಿಸುವೆನು.›‹ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆ›‹ನನ್ನ ದೇವರ ಹೆಸರನ್ನು, ನನ್ನ›‹ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ,›‹ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.›