ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, “ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕಾಗಿ ಯಾವ ಮಾರ್ಗವಾಗಿ ಬಂದಿತು?” ಎಂದನು.
TSK
TSK · ಲೂಕನು 6:29
Treasury of Scripture Knowledge references in ಕನ್ನಡ IRV.
ಹೊಡೆಯುವವನಿಗೆ ತನ್ನ ಕೆನ್ನೆಯನ್ನು ಕೊಟ್ಟು ಅವಮಾನವನ್ನು ಹೊಟ್ಟೆತುಂಬಾ ತಿನ್ನಲಿ.
‹ಆದರೆ ನಾನು ನಿಮಗೆ ಹೇಳುವುದೇನಂದರೆ, ಕೆಡುಕನನ್ನು ವಿರೋಧಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ನಿನ್ನ ಮತ್ತೊಂದು ಕೆನ್ನೆಯನ್ನು ಸಹ ತಿರುಗಿಸು.›
ಆಗ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಹೊಡೆದು,
ಯೇಸು ಈ ಮಾತನ್ನು ಹೇಳಿದಾಗ ಹತ್ತಿರ ನಿಂತಿದ್ದ ಕಾವಲಾಳುಗಳಲ್ಲಿ ಒಬ್ಬನು ತನ್ನ ಕೈಯಿಂದ ಯೇಸುವಿನ ಕೆನ್ನೆಗೆ ಹೊಡೆದು, “ನೀನು ಮಹಾಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ?” ಎಂದನು.
ಈ ಗಳಿಗೆಯವರೆಗೂ ನಾವು ಹಸಿದವರೂ, ಬಾಯಾರಿಕೆಯುಳ್ಳವರೂ, ವಸ್ತ್ರವಿಲ್ಲದವರೂ, ಪೆಟ್ಟು ತಿನ್ನುವವರೂ ಮನೆಯಿಲ್ಲದವರೂ,
ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ, ಒಬ್ಬನು ನಿಮ್ಮನ್ನು ನುಂಗಿಬಿಟ್ಟರೂ, ಒಬ್ಬನು ನಿಮ್ಮನ್ನು ಮರಳುಗೊಳಿಸಿ ಹಿಡಿದರೂ, ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ, ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ಸಹಿಸಿಕೊಳ್ಳುತ್ತೀರಲ್ಲಾ.