TSK

TSK · ಲೂಕನು 6:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನನ್ನ ಪ್ರಾಣವನ್ನು ತೆಗೆಯಬೇಕೆನ್ನುವವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು, ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ.

“ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು” ಎಂದು ಬಹು ಜನರು ಗುಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತ ಸ್ನೇಹಿತರೆಲ್ಲರೂ “ಇವನು ಎಡವಿ ಬೀಳಲಿ” ಎಂದು ನನ್ನನ್ನು ಹೊಂಚಿನೋಡುತ್ತಾ, “ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು” ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ.

ಕೆಲವರು ಯೇಸುವಿನ ಮೇಲೆ ತಪ್ಪುಹೊರಿಸುವುದಕ್ಕೆ, ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚುಹಾಕಿ ನೋಡುತ್ತಾ ಇದ್ದರು.

ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ, ಸಬ್ಬತ್ ದಿನದಲ್ಲಿ ಯೇಸು ಸ್ವಸ್ಥ ಮಾಡಿದನಲ್ಲಾ ಎಂದು ಸಿಟ್ಟುಗೊಂಡು ಜನರಿಗೆ, “ಕೆಲಸ ಮಾಡುವುದಕ್ಕೆ ಆರು ದಿನಗಳು ಅವೆಯಷ್ಟೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಬೇಡ” ಎಂದು ಹೇಳಿದನು.

ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಿಗಳಿಗೂ ಒಪ್ಪಿಸಬೇಕೆಂದು ಹೊಂಚು ಹಾಕುತ್ತಾ, ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ತಪ್ಪುಗಳನ್ನು ಕಂಡುಹಿಡಿಯುವುದಕ್ಕೆ (ಆತನ ಬಳಿಗೆ) ಕಳುಹಿಸಿದರು.

ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು ದೇವರಿಂದ ಬಂದವನಲ್ಲ, ಏಕೆಂದರೆ ಆತನು ಸಬ್ಬತ್ ದಿನವನ್ನು ಆಚರಿಸುವುದಿಲ್ಲ” ಎಂದರು. ಇನ್ನು ಕೆಲವರು, “ಇಂಥಾ ಮಹತ್ಕಾರ್ಯಗಳನ್ನು ಮಾಡುವುದು ಪಾಪಿಯಾದ ಮನುಷ್ಯನಿಂದ ಹೇಗಾದೀತು?” ಎಂದರು. ಹೀಗೆ ಅವರಲ್ಲಿ ಭೇದವುಂಟಾಯಿತು.