TSK

TSK · ಲೂಕನು 7:40

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.

‹ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತೀರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.›

¶ ಆದರೆ ಅವರು ಹಾಗಂದುಕೊಳ್ಳುವುದನ್ನು ಯೇಸುವು ತಿಳಿದುಕೊಂಡು ಅವರಿಗೆ, ‹“ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುವುದೇನು?›

ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ, ‹“ಎದ್ದು ನಡುವೆ ಬಂದು ನಿಂತುಕೋ”› ಎಂದು ಹೇಳಿದನು. ಅವನು ಎದ್ದುಬಂದು ನಿಂತುಕೊಂಡನು.

ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಿಗಳಿಗೂ ಒಪ್ಪಿಸಬೇಕೆಂದು ಹೊಂಚು ಹಾಕುತ್ತಾ, ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ತಪ್ಪುಗಳನ್ನು ಕಂಡುಹಿಡಿಯುವುದಕ್ಕೆ (ಆತನ ಬಳಿಗೆ) ಕಳುಹಿಸಿದರು.

‹ನೀವು ನನ್ನನ್ನು ಗುರುವೆಂದೂ ಮತ್ತು ಕರ್ತನೆಂದೂ ಕರೆಯುತ್ತೀರಿ. ನೀವು ಹೇಳುವುದು ಸರಿ. ಹೌದು, ನಾನು ಅಂಥವನೇ ಆಗಿದ್ದೇನೆ.›

ನೀನು ಸಮಸ್ತವನ್ನು ತಿಳಿದವನೆಂದೂ, ನಿನಗೆ ಪ್ರಶ್ನೆ ಮಾಡಬೇಕಾದ ಅಗತ್ಯವಿಲ್ಲವೆಂದೂ ಈಗ ನಮಗೆ ತಿಳಿಯಿತು. ಆದುದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೇ ಎಂದು ನಾವು ನಂಬುತ್ತೇವೆ” ಎಂದರು.