TSK

TSK · ಲೂಕನು 8:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.

ಹೀಗಿರುವುದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ, ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವುದು, ವಿವೇಕಿಗಳ ವಿವೇಕವು ಅಡಗುವುದು” ಎಂದು ಹೇಳಿದನು.

ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢ ಜನರೇ, ಯೆಹೋವನ ಈ ಮಾತನ್ನು ಕೇಳಿರಿ,

ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, ‹“ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.›

ಆತನು ಅವರಿಗೆ, ‹“ದೇವರ ರಾಜ್ಯದ ರಹಸ್ಯ ನಿಮಗೆ ದೊರೆತಿದೆ; ಆದರೆ ಹೊರಗಿನವರಿಗೆ ಎಲ್ಲವನ್ನು ಸಾಮ್ಯಗಳ ರೂಪದಲ್ಲಿ ಹೇಳಿದ್ದೇನೆ.”›

“ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ.

ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. ಉಳಿದವರು ಮೊಂಡರಾದರು.

ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ.

ಆತನು ಮರ್ಮವನ್ನು ಪ್ರಕಟಣೆಯಿಂದ ನನಗೆ ತಿಳಿಯಪಡಿಸಿದನೆಂದು ಅದನ್ನು ಕುರಿತು ನಾನು ಮೊದಲೇ ನಿಮಗೆ ಸಂಕ್ಷಿಪ್ತವಾಗಿ ಬರೆದಿದ್ದೇನೆ.

ಅವರ ಹೃದಯಗಳು ಉತ್ತೇಜನಗೊಂಡು, ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ.

¶ ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.