TSK

TSK · ಲೂಕನು 8:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ‹“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.›

‹ಅದಕ್ಕೆ ಉತ್ತರವಾಗಿ ಅರಸನು,›‹‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.›

ಆಗ ಯೇಸು ಅವರಿಗೆ, ‹“ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ಅವರು ನನ್ನನ್ನು ನೋಡುವರು”› ಎಂದು ಹೇಳಿದನು.

¶ ಯೇಸು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು, “ನಿನ್ನನ್ನು ಹೊತ್ತ ಗರ್ಭವೂ, ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು” ಎಂದು ಕೂಗಿದಳು.

‹ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.›

ಯೇಸು ಆಕೆಗೆ, ‹“ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು”› ಎಂದನು.

ಇದಲ್ಲದೆ, “ನಾನು ನಿಮ್ಮನ್ನು ಸ್ವೀಕರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ, ಕುಮಾರಿಯರು ಆಗಿರುವಿರೆಂದು” ಸರ್ವಶಕ್ತನಾದ ಕರ್ತನು ಹೇಳುತ್ತಾನೆ.

ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.

ಆತನ ಆಜ್ಞೆಗಳನ್ನು ಕೈಕೊಂಡು ಆತನಿಗೆ ಮೆಚ್ಚಿಕೆಯಾಗುವ ಕಾರ್ಯಗಳನ್ನು ಮಾಡುವವರಾದರೆ ನಾವು ಏನು ಬೇಡಿಕೊಂಡರೂ ಆತನಿಂದ ಹೊಂದುವೆವು.