TSK

TSK · ಲೂಕನು 8:41

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೇಸು ಅವನಿಗೆ, ‹“ನಾನು ಬಂದು ಅವನನ್ನು ವಾಸಿ ಮಾಡುತ್ತೇನೆ”› ಎಂದು ಹೇಳಲು,

ಆಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯೀರನೆಂಬವನು ಬಂದು ಯೇಸುವನ್ನು ಕಂಡು ಆತನ ಪಾದಗಳಿಗೆ ಬಿದ್ದು,

¶ ಆತನು ಇನ್ನೂ ಮಾತನಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವನೊಬ್ಬನು ಬಂದು, “ನಿನ್ನ ಮಗಳು ಸತ್ತುಹೋದಳು, ಗುರುವಿಗೆ ತೊಂದರೆ ಕೊಡಬೇಡ” ಅಂದನು.

ಯೇಸುವಿನ ಪಾದಗಳಿಗೆ ಅಡ್ಡಬಿದ್ದು, ಆತನಿಗೆ ಕೃತಜ್ಞತಾಸುತ್ತಿಯನ್ನು ಸಲ್ಲಿಸಿದನು. ಅವನು ಸಮಾರ್ಯದವನು.

ಆಗ ಮಾರ್ಥಳು ಯೇಸುವಿಗೆ, “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ.

ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; “ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ” ಎಂದು ಅವರಿಗೆ ಹೇಳಿ ಕಳುಹಿಸಿದರು.

ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ.