ಆಸನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ಬಹು ಕಠಿಣವಾದ ರೋಗ ತಗಲಿತು. ಈ ರೋಗದಲ್ಲೂ ಅವನು ಯೆಹೋವನ ಸಹಾಯವನ್ನು ಕೋರದೆ ವೈದ್ಯರ ಸಹಾಯವನ್ನೇ ಕೋರಿದನು.
TSK
TSK · ಲೂಕನು 8:43
Treasury of Scripture Knowledge references in ಕನ್ನಡ IRV.
ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು. ಮನುಷ್ಯರ ಸಹಾಯವು ವ್ಯರ್ಥ.
“ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ.
¶ ಆಗ ಅಲ್ಲಿ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು ಇದ್ದಳು.
ಯೇಸು ಅವನ ತಂದೆಯನ್ನು, ‹“ಇವನಿಗೆ ಹೀಗಾಗಿ ಎಷ್ಟು ಕಾಲವಾಯಿತು?”› ಎಂದು ಕೇಳಿದಾಗ ಅವನು, “ಚಿಕ್ಕಂದಿನಲ್ಲಿಯೇ ಬಂದಿದೆ;
ಅಲ್ಲಿ ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ಬಾಧಿತಳಾಗಿ ಬೆನ್ನು ಬಗ್ಗಿ ಹೋಗಿ ಗೂನಿಯಾಗಿದ್ದು ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದ ಒಬ್ಬ ಹೆಂಗಸು ಇದ್ದಳು.
ಅಲ್ಲಿ ಮೂವತ್ತೆಂಟು ವರ್ಷಗಳಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನಿದ್ದನು.
ಈಗ ಇವನು ನೋಡುವುದು ಹೇಗೆಂದು ನಮಗೆ ಗೊತ್ತಿಲ್ಲ. ಯಾರು ಇವನ ಕಣ್ಣುಗಳನ್ನು ತೆರೆದರೋ ನಮಗೆ ಗೊತ್ತಿಲ್ಲ, ಇವನನ್ನೇ ಕೇಳಿರಿ. ಇವನು ಪ್ರಾಯದವನಾಗಿದ್ದಾನಲ್ಲಾ, ಇವನೇ ತನ್ನ ವಿಷಯವಾಗಿ ಹೇಳುವನು” ಎಂದು ಉತ್ತರಕೊಟ್ಟರು.
ಈ ಸೂಚಕಕಾರ್ಯದಿಂದ ಸ್ವಸ್ಥತೆ ಹೊಂದಿದ ಆ ಮನುಷ್ಯನಿಗೆ ನಲವತ್ತು ವರ್ಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.