TSK

TSK · ಲೂಕನು 9:30

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇದಲ್ಲದೆ ಎಲೀಯನೂ, ಮೋಶೆಯೂ ಅವರಿಗೆ ಕಾಣಿಸಿಕೊಂಡು ಅವರು ಯೇಸುವಿನ ಸಂಗಡ ಮಾತನಾಡುತ್ತಿದ್ದರು.

ಅವರು, “ನಿನ್ನನ್ನು ಸ್ನಾನಿಕನಾದ ಯೋಹಾನನು ಎಂದೂ, ಕೆಲವರು ಎಲೀಯನು ಎಂದೂ, ಇನ್ನು ಕೆಲವರು ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆ ಎಂದು ಅನ್ನುತ್ತಿದ್ದಾರೆ” ಎಂದು ಹೇಳಿದರು.

¶ ತರುವಾಯ ಯೇಸು, ‹“ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?”› ಅಂದನು.

¶ ಈಗಲಾದರೋ ದೇವರಿಂದ ದೊರಕುವ ನೀತಿಯು ನಂಬುವವರೆಲ್ಲರಿಗೆ ಧರ್ಮಶಾಸ್ತ್ರ ನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತವೆ.

ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವುದರಿಂದ ಮೋಶೆಗಿಂತ ಯೇಸು ಹೆಚ್ಚಾದ ಗೌರವಕ್ಕೆ ಯೋಗ್ಯನೆಂದೆಣಿಸಲ್ಪಟ್ಟಿದ್ದಾನೆ.