TSK

TSK · ಲೂಕನು 9:41

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವುದೇನೆಂದರೆ, ‘ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.

¶ ಯೆಹೋವನು ಮೋಶೆಗೆ, “ಈ ಜನರು ಇನ್ನು ಎಷ್ಟರವರೆಗೆ ನನ್ನನ್ನು ಅಲಕ್ಷ್ಯಮಾಡುವರು? ನಾನು ನಡೆಸಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನು ಎಷ್ಟು ದಿನ ನನ್ನನ್ನು ನಂಬದೆ ಇರುವರು?

ಆದರೆ ಅವರು ದ್ರೋಹಿಗಳೇ, ಮಕ್ಕಳಲ್ಲ; ಇದು ಅವರ ದೋಷವು; ಅವರು ವಕ್ರಬುದ್ಧಿಯುಳ್ಳ ಮೂರ್ಖಜಾತಿಯವರು.

ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು, ನನ್ನ ಆಜ್ಞೆಗಳನ್ನು ಕೈಗೊಳ್ಳುವರು” ಎಂಬುದೇ.

¶ ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?

‹“ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತಾರೆ. ಆದರೆ ಯೋನನೆಂಬ ಪ್ರವಾದಿಯಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ.›

‹ವ್ಯಭಿಚಾರಿಣಿಯಂತಿರುವ ಈ ದುಷ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಹುಡುಕುತ್ತದೆ. ಆದರೆ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ”› ಎಂದು ಉತ್ತರ ಕೊಟ್ಟನು. ತರುವಾಯ ಆತನು ಅವರನ್ನು ಬಿಟ್ಟು ಹೊರಟು ಹೋದನು.

‹ಇದೆಲ್ಲಾ ಈ ಸಂತತಿಯವರ ಮೇಲೆ ಬರುವುದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›

ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ, ‹“ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ಏಕೆಂದರೆ ದೇವರ ರಾಜ್ಯವು ಇಂಥವರದೇ.›

ತರುವಾಯ ಆತನು, ‹“ನಿಮ್ಮ ನಂಬಿಕೆ ಎಲ್ಲಿ?”› ಎಂದು ಅವರನ್ನು ಕೇಳಿದನು. ಅವರು ಭಯಪಟ್ಟು, “ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವು ಕೂಡ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ?” ಎಂದು ಆಶ್ಚರ್ಯಪಟ್ಟು ಒಬ್ಬರಿಗೊಬ್ಬರು ಮಾತನಾಡಿಕೊಂಡು.

ಆ ಮೇಲೆ ತೋಮನಿಗೆ, ‹“ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು”› ಎಂದು ಹೇಳಿದನು.

ಆತನು ಸುಮಾರು ನಲವತ್ತು ವರ್ಷಗಳವರೆಗೂ ಅಡವಿಯಲ್ಲಿ ಅವರ ನಡವಳಿಕೆಯನ್ನು ಸಹಿಸಿಕೊಂಡು,

ನಿಮ್ಮ ಹಿರಿಯರು ಮೊಂಡುತನದಿಂದ ನನ್ನನ್ನು ಪರೀಕ್ಷಿಸಿ, ನಲವತ್ತು ವರ್ಷ ನನ್ನ ಕೃತ್ಯಗಳನ್ನು ನೋಡಿದರು.

ಇಸ್ರಾಯೇಲ್ಯರಿಗೆ ದೇವರ ವಿಶ್ರಾಂತಿಯ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು. ಆದರೆ ಆ ಕಾಲದಲ್ಲಿ ಕೇಳಿದವರ ನಂಬಿಕೆಯೊಂದಿಗೆ ಇವರು ಪಾಲುಗಾರರಾಗದ ಕಾರಣ ಆ ಸಂದೇಶದಿಂದ ಅವರಿಗೆ ಪ್ರಯೋಜನವಾಗಲಿಲ್ಲ.

ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.