TSK

TSK · ಲೂಕನು 9:55

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಜನರು ದಾವೀದನಿಗೆ “ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು, ಆಗ ನೀನು ಅವನನ್ನು ಮನಸ್ಸಿಗೆ ಬಂದಂತೆ ನಡೆಸಬಹುದು ಎಂದು ಯೆಹೋವನು ನಿನಗೆ ಹೇಳಿದ ಮಾತು ನೆರವೇರುವ ದಿನ ಇದೇ” ಅಂದಾಗ ಅವನೆದ್ದು ಮೆಲ್ಲನೆ ಹೋಗಿ ಸೌಲನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡನು.

ಅದಕ್ಕೆ ದಾವೀದನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ, ನೀವು ನನಗೆ ಯಾಕೆ ಶತ್ರುಗಳಾಗಬೇಕು? ಈ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಒಬ್ಬನಿಗೆ ಮರಣದಂಡನೆಯಾಗುವುದು ಸರಿಯೋ? ನಾನು ಇಸ್ರಾಯೇಲರ ಅರಸನೆಂಬುದು ಈಹೊತ್ತು ಸ್ಪಷ್ಟವಾಗಿ ಗೊತ್ತಾಯಿತು” ಎಂದು ನುಡಿದನು.

ಯಾರಿಗೆ ಮಾತುಗಳನ್ನು ಕಲಿಸಿದ್ದಿ? ನಿನ್ನಿಂದ ಹೊರಟ ನುಡಿಗಳನ್ನು ಯಾವ ಆತ್ಮವು ಪ್ರೇರೇಪಿಸಿತು?”

ನ್ಯಾಯವನ್ನೇ ಆರಿಸಿಕೊಳ್ಳೋಣ, ಒಳ್ಳೆಯದು ಇಂಥದೆಂದು ನಮ್ಮನಮ್ಮೊಳಗೆ ನಿಶ್ಚಯಿಸಿಕೊಳ್ಳೋಣ.

ಆದಕಾರಣ ನಾನು ಆಡಿದ್ದನ್ನು ತಿರಸ್ಕರಿಸಿ ಧೂಳಿನಲ್ಲಿಯೂ, ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ” ಎಂದನು.

ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು?

ಆದರೆ ಪೇತ್ರನು ಆತನಿಗೆ, “ಎಲ್ಲರೂ ನಿನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿದರೂ ನಾನು ಮಾತ್ರ ಎಂದಿಗೂ ಹಿಂಜರಿಯುವುದಿಲ್ಲ” ಎಂದು ಉತ್ತರ ಕೊಟ್ಟನು.

ಇಗೋ ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು.

“ಸುಣ್ಣ ಬಳಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು. ನೀನು ಧರ್ಮಶಾಸ್ತ್ರನುಸಾರವಾಗಿ, ನನ್ನನ್ನು ವಿಚಾರಣೆಮಾಡುವುದಕ್ಕೆ ಕುಳಿತುಕೊಂಡು ಧರ್ಮಶಾಸ್ತ್ರದ ವಿರುದ್ಧವಾಗಿ ನನ್ನನ್ನು ಹೊಡೆಯುವುದಕ್ಕೆ ಅಪ್ಪಣೆಕೊಡುತ್ತೀಯೋ?” ಅಂದನು.

ಅದೇ ಬಾಯಿಂದ ಸ್ತುತಿ ಮತ್ತು ಶಾಪ ಎರಡೂ ಬರುತ್ತವೆ. ನನ್ನ ಸಹೋದರರೇ,

‹ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.›