TSK

TSK · ಮಲಾಕಿಯ 1:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ನೀನು ಫರೋಹನಿಗೆ, ‘ಇಸ್ರಾಯೇಲನು ನನ್ನ ಮಗನು, ನನಗೆ ಚೊಚ್ಚಲಮಗನು.

¶ “‘ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.

ದುರಾಚಾರಿಗಳಿರಾ, ಅವಿವೇಕಿಗಳಿರಾ, ಯೆಹೋವನ ವಿಷಯದಲ್ಲಿ ಈ ರೀತಿಯಾಗಿ ವರ್ತಿಸಬಹುದೇ? ಆತನು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೇ; ನಿಮ್ಮನ್ನು ಜನಾಂಗವನ್ನಾಗಿ ಮಾಡಿ ಸ್ಥಾಪಿಸಿದನಲ್ಲವೇ.

ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.

ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ.

“ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷಿಬಳ್ಳಿಯ ಕೆಟ್ಟರೆಂಬೆಗಳಂತೆ ಆಗಲು ಕಾರಣವೇನು?

ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು. ಹೌದು ನನ್ನ ಆಲಯದಲ್ಲಿಯೇ ಅವರ ಕೆಟ್ಟತನವನ್ನು ಕಂಡಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.

ರೇಕಾಬನ ಮಗನಾದ ಯೋನಾದಾಬನ ಸಂತಾನದವರು ತಮ್ಮ ಪಿತೃವು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸುತ್ತಿರುವಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದುದರಿಂದ,

ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.

ಎಫ್ರಾಯೀಮು, “ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ; ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ” ಎಂದು ಅಂದುಕೊಳ್ಳುತ್ತದೋ?

¶ “ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ನಿನಗೂ, ನಿನ್ನ ಯೌವನ ಪ್ರಾಯದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ, ನಿನ್ನ ಸಹಚರಿಣಿಯೂ, ನಿನ್ನ ಒಡಂಬಡಿಕೆಯ ಪತ್ನಿಯಾದ ಆಕೆಗೆ ದ್ರೋಹಮಾಡಿದ್ದೀ.

¶ “ನಿಮ್ಮ ಪೂರ್ವಿಕರ ಕಾಲದಿಂದಲೂ ನೀವು ನನ್ನ ವಿಧಿಗಳನ್ನು ಅನುಸರಿಸಿ ನಡೆಯಲ್ಲಿಲ್ಲ. ನನ್ನ ಕಡೆಗೆ ಪುನಃ ತಿರುಗಿರಿ; ತಿರುಗಿದರೆ, ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಯಾವ ವಿಷಯದಲ್ಲಿ ತಿರುಗೋಣ?” ಎನ್ನುತ್ತೀರಿ.

‹ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು,›

¶ ‹“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.›

‹ಅವನು ‘ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕಾಗಿಲ್ಲ’ ಅನ್ನುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ಸಲುವಾಗಿ ದೇವರ ವಾಕ್ಯವನ್ನು ನಿರರ್ಥಕ ಮಾಡಿದ್ದೀರಿ.›

‹‘ನಿನ್ನ›‹ತಂದೆತಾಯಿಗಳನ್ನು ಗೌರವಿಸಬೇಕು’ ಮತ್ತು›‹‘ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣದಂಡನೆ ಆಗಬೇಕೆಂತಲೂ’ ಮೋಶೆಯು ಹೇಳಿದ್ದಾನೆ.›

‹ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರವೇ ನೀವೂ ಕರುಣೆಯುಳ್ಳವರಾಗಿರಿ.›

ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವುದಕ್ಕೆ ಅಪೇಕ್ಷಿಸಿ, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಕೇಳಲು,

‹ನೀವು ನನ್ನನ್ನು ಗುರುವೆಂದೂ ಮತ್ತು ಕರ್ತನೆಂದೂ ಕರೆಯುತ್ತೀರಿ. ನೀವು ಹೇಳುವುದು ಸರಿ. ಹೌದು, ನಾನು ಅಂಥವನೇ ಆಗಿದ್ದೇನೆ.›

¶ ದಾಸತ್ವ ನೊಗದ ಅಧೀನದಲ್ಲಿರುವವರು ತಮ್ಮ ಯಜಮಾನರನ್ನು ಪೂರ್ಣ ಗೌರವಕ್ಕೂ ಯೋಗ್ಯರೆಂದೆಣಿಸಲಿ, ಇಲ್ಲದಿದ್ದರೆ ದೇವರ ನಾಮಕ್ಕೂ ನಾವು ಹೊಂದಿರುವ ಉಪದೇಶಕ್ಕೂ ನಿಂದನೆ ಉಂಟಾಗುತ್ತದೆ.

¶ ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.