TSK

TSK · ಮಲಾಕಿಯ 3:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿಮ್ಮ ದೇವರಾದ ಯೆಹೋವನು ಉತ್ತಮವಾದ ದೇಶಕ್ಕೆ ನಿಮ್ಮನ್ನು ಸೇರಿಸುತ್ತಾನೆ. ಆ ದೇಶದ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತದೆ; ಮತ್ತು ತಗ್ಗುಗಳಲ್ಲಾಗಲಿ, ಗುಡ್ಡಗಳಲ್ಲಾಗಲಿ ಎಲ್ಲಾ ಕಡೆಯೂ ಬುಗ್ಗೆಗಳಿಂದ ನೀರು ಉಕ್ಕುತ್ತದೆ.

ಅನೇಕರು ಯೆಹೋವನಿಗೋಸ್ಕರ ಕಾಣಿಕೆಗಳನ್ನೂ, ಯೆಹೂದ್ಯರ ಅರಸನಾದ ಹಿಜ್ಕೀಯನಿಗೋಸ್ಕರ ಶ್ರೇಷ್ಠ ವಸ್ತುಗಳನ್ನೂ ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲಾ ಜನಾಂಗಗಳವರು ಹಿಜ್ಕೀಯನನ್ನು ಬಹಳ ದೊಡ್ಡವನೆಂದು ಪರಿಗಣಿಸುತ್ತಿದ್ದರು.

ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವುದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವುದು. ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು.

ಯುವಕನು ಯುವತಿಯನ್ನು ವರಿಸುವಂತೆ, ನಿನ್ನ ಮಕ್ಕಳು ನಿನ್ನನ್ನು ವರಿಸುವರು; ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.

ಅವುಗಳೊಳಗೆ ಒಂದರಲ್ಲಿ ಒಂದು ಚಿಕ್ಕ ಕೊಂಬು ಮೊಳೆತು ಬಹು ದೊಡ್ಡದಾಗಿ ಬೆಳೆದು ದಕ್ಷಿಣದಲ್ಲಿಯೂ, ಪೂರ್ವದಲ್ಲಿಯೂ ಅಂದಚಂದದ ದೇಶದಲ್ಲಿಯೂ ಪ್ರಬಲವಾಯಿತು.

ಆಹಾ, ಆ ಕಾಲದಲ್ಲಿ ನಿನ್ನನ್ನು ಬಾಧಿಸುವವರಿಗೆ ತಕ್ಕದ್ದನ್ನು ಮಾಡುವೆನು; ನಿನ್ನಲ್ಲಿ ಕುಂಟುವವರನ್ನು ರಕ್ಷಿಸುವೆನು, ಚದರಿ ಹೋದವರನ್ನು ಕೂಡಿಸುವೆನು; ಅಂತು ಲೋಕದಲ್ಲೆಲ್ಲಾ ಅವಮಾನಪಟ್ಟವರಿಗೆ ಸ್ತೋತ್ರ ಕೀರ್ತನೆಗಳನ್ನು ಉಂಟುಮಾಡುವೆನು.

ಆತನು ತನ್ನ ದಾಸಿಯ ದೀನಸ್ಥಿತಿಯ ಮೇಲೆ ಲಕ್ಷ್ಯವಿಟ್ಟಿದ್ದಾನೆ. ಇಗೋ, ಇಂದಿನಿಂದ ತಲತಲಾಂತರದವರೆಗೆ ಎಲ್ಲರೂ ನನ್ನನ್ನು ಧನ್ಯಳೆಂದು ಹೊಗಳುವರು,