TSK

TSK · ಮಲಾಕಿಯ 3:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ಐಗುಪ್ತ್ಯರಿಗೂ, ಇಸ್ರಾಯೇಲರಿಗೂ ಯೆಹೋವನು ವ್ಯತ್ಯಾಸಮಾಡಿದ್ದಾನೆಂಬುದು ನಿಮಗೆ ತಿಳಿಯುವಂತೆ ಇಸ್ರಾಯೇಲರಲ್ಲಿರುವ ಮನುಷ್ಯರ ಎದುರಿಗಾಗಲಿ, ಪಶುಗಳ ಎದುರಿಗಾಗಲಿ ಒಂದು ನಾಯಿಯಾದರೂ ಬೊಗಳುವುದಿಲ್ಲ’

ದಯವಿಟ್ಟು ನನ್ನ ವಿಚಾರಣೆಗೆ ಅನ್ಯಾಯವಾಗದಿರಲಿ; ಮತ್ತೆ ವಿಮರ್ಶೆ ಮಾಡಿರಿ. ನನ್ನ ವ್ಯಾಜ್ಯವು ನ್ಯಾಯವಾದದ್ದು.

ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ, ಅವರ ರಕ್ತದಲ್ಲಿ ಕಾಲಾಡಿಸುವರು.

ನೋಡಿರಿ, ನಾನು ಅವರನ್ನು ಕಿತ್ತುಹಾಕಿದ ಮೇಲೆ ತಿರುಗಿ ಅವರ ಮೇಲೆ ಕನಿಕರಪಟ್ಟು ಪ್ರತಿಯೊಬ್ಬನನ್ನೂ ಅವನವನ ಸ್ವತ್ತಿಗೂ, ಅವನವನ ದೇಶಕ್ಕೂ ಪುನಃ ಬರಮಾಡುವೆನು.

¶ “ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.

ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು.

ನೀವು “ದೇವರನ್ನು ಸೇವಿಸುವುದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರನಾದ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದ್ದರಿಂದ ಆದ ಲಾಭವೇನು?

‹ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.›

ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು;

ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.

¶ ದೇವರ ನೀತಿಯುಳ್ಳ ತೀರ್ಪಿಗೆ ಪ್ರಮಾಣ ಯಾವುದೆಂದರೆ, ನೀವು ಪ್ರಯಾಸಪಡುತ್ತಿರುವ ದೇವರ ರಾಜ್ಯಕ್ಕೆ ನಿಮ್ಮನ್ನು ಯೋಗ್ಯರನ್ನಾಗಿಸುವುದು.