TSK

TSK · ಮಲಾಕಿಯ 3:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನ ಒಡಂಬಡಿಕೆ ಮಂಜೂಷವನ್ನು ಹೊತ್ತ ಲೇವಿಯರಿಗೆ ದೇವರ ಸಹಾಯ ದೊರೆತದ್ದರಿಂದ ಏಳು ಹೋರಿಗಳನ್ನೂ ಮತ್ತು ಏಳು ಟಗರುಗಳನ್ನೂ ಯಜ್ಞಮಾಡಿದರು.

ಅಲ್ಲಿ ದಾವೀದನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿ, ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ, ಆಕಾಶದಿಂದ ಯಜ್ಞವೇದಿಯ ಮೇಲೆ ಬೆಂಕಿಯನ್ನು ಸುರಿಸಿ,

ಆಗ ಸೊಲೊಮೋನನು ದೇವದರ್ಶನ ಗುಡಾರದ ಬಳಿಯಲ್ಲಿ ಯೆಹೋವನ ಮುಂದೆ ಇರುವ ತಾಮ್ರದ ಯಜ್ಞವೇದಿಯ ಬಳಿಗೆ ಹೋಗಿ ಅದರ ಮೇಲೆ ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು.

ಏಳನೆಯ ತಿಂಗಳಿನ ಇಪ್ಪತ್ತ ಮೂರನೆಯ ದಿನದಲ್ಲಿ, ಅರಸನು ಜನರಿಗೆ ಅಪ್ಪಣೆಕೊಡಲು ಅವರು ಯೆಹೋವನಿಂದ ದಾವೀದ, ಸೊಲೊಮೋನರಿಗೂ, ಆತನ ಪ್ರಜೆಗಳಾದ ಇಸ್ರಾಯೇಲರಿಗೂ ಉಂಟಾದ ಉಪಕಾರಗಳನ್ನು ನೆನಪುಮಾಡಿಕೊಂಡು ಆನಂದಭರಿತರಾಗಿ, ಸಂತೋಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ಹೊರಟು ಹೋದರು.

¶ ಆಮೇಲೆ ಹಿಜ್ಕೀಯನು ಸಮೂಹದವರಿಗೆ, “ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರುವಿಯಲ್ಲಾ; ಹತ್ತಿರ ಬಂದು ಯೆಹೋವನಿಗೆ ಸ್ತೋತ್ರಮಾಡಿ ಆತನ ಆಲಯಕ್ಕೋಸ್ಕರ ಸಮಾಧಾನ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ” ಎನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವ ಇಚ್ಛೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು.

ಹಿಜ್ಕೀಯನು ಯೆಹೂದದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಯೆಹೋವನಿಗೆ ಒಳ್ಳೆಯವನೂ, ನೀತಿವಂತನೂ, ನಂಬಿಗಸ್ತನೂ ಆಗಿ ನಡೆದನು.

ಪೂರ್ವದಲ್ಲಿ ನಿನಗಿದ್ದ ನ್ಯಾಯಾಧಿಪತಿಗಳನ್ನು, ಮಂತ್ರಾಲೋಚಕರನ್ನು ಪುನಃ ಒದಗಿಸಿಕೊಡುವೆನು. ಆ ಮೇಲೆ ನೀನು ಸದಾಚಾರದ ನಗರಿ ಎಂತಲೂ, ಸ್ವಾಮಿ ನಿಷ್ಠೆಯುಳ್ಳ ನಗರಿ ಎಂತಲೂ ಕರೆಯಲ್ಪಡುವಿ.”

“ನೀನು ಹೋಗಿ ಯೆರೂಸಲೇಮಿನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ನೀನು ಯೌವನದಲ್ಲಿ ನನ್ನ ಮೇಲೆ ಇಟ್ಟಿದ್ದ ಪ್ರೀತಿಯನ್ನೂ, ವಿವಾಹಕಾಲದ ನಿನ್ನ ಪ್ರೇಮವನ್ನೂ, ನೀನು ಬಿತ್ತನೆ ಮಾಡದ ಅರಣ್ಯದಲ್ಲಿ ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.

¶ ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ’ ಎಂದು ಮತ್ತೆ ಮಾತನಾಡುವರು.

ಹೀಗೆ ಏಳು ದಿನ ಯಜ್ಞವೇದಿಯ ದೋಷವನ್ನು ಪರಿಹರಿಸುತ್ತಾ ಅದನ್ನು ಶುದ್ಧಿ ಮಾಡಿ ಪ್ರತಿಷ್ಠಿಸಬೇಕು.

¶ ಆ ದಿನದಲ್ಲಿ, “ಯೆಹೋವನಿಗೆ ಮೀಸಲು” ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವುದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು.