ಇಗೋ ಒಂದು ವಾಣಿ! “ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಿಪಡಿಸಿರಿ”
TSK
TSK · ಮಲಾಕಿಯ 4:5
Treasury of Scripture Knowledge references in ಕನ್ನಡ IRV.
¶ “ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
‹ಎಲ್ಲಾ ಪ್ರವಾದಿಗಳೂ, ಧರ್ಮಶಾಸ್ತ್ರವು ಯೋಹಾನನ ತನಕ ಪ್ರವಾದಿಸಿದರು.›
ಅಲ್ಲಿ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, “ಇವನು ಎಲೀಯನನ್ನು ಕರೆಯುತ್ತಿದ್ದಾನೆ” ಅಂದನು.
ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ ಕರ್ತನ ಮುಂದೂತನಾಗಿ ಹೋಗುವನು. ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ, ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತನಿಗಾಗಿ ಜನರನ್ನು ಸಿದ್ಧಪಡಿಸುವನು” ಎಂದು ಹೇಳಿದನು.
ಇದಲ್ಲದೆ ಇಬ್ಬರು ಪುರುಷರು ಆತನ ಸಂಗಡ ಮಾತನಾಡುತ್ತಿದ್ದರು. ಅವರು ಯಾರೆಂದರೆ ಮೋಶೆಯೂ ಎಲೀಯನೂ.
ಅವರು ಅವನಿಗೆ, “ನೀನು ಕ್ರಿಸ್ತನಾಗಲಿ, ಎಲೀಯನಾಗಲಿ ಆ ಪ್ರವಾದಿಯಾಗಲಿ ಆಗಿರದಿದ್ದರೆ, ನೀನು ದೀಕ್ಷಾಸ್ನಾನ ಕೊಡುವುದೇಕೆ?” ಎಂದು ಪ್ರಶ್ನಿಸಿದರು.
ಏಕೆಂದರೆ ಅವರ ಕೋಪಾಗ್ನಿಯು ಕಾಣಿಸುವ ಮಹಾ ದಿನವು ಬಂದಿದೆ, ಅದರ ಮುಂದೆ ನಿಲ್ಲುವುದಕ್ಕೆ ಯಾರಿಂದಾದೀತು?” ಎಂದು ಹೇಳಿದರು.