TSK

TSK · ಮಾರ್ಕನು 1:24

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾವು ಐಗುಪ್ತ ದೇಶದಲ್ಲಿರುವಾಗಲೇ, ‘ನೀನು ನಮ್ಮ ಗೊಡವೆಗೆ ಬರಬೇಡ. ನಾವು ಐಗುಪ್ತ್ಯರಿಗೆ ದಾಸರಾಗಿಯೇ ಇರುವೆವು’ ಎಂಬುದಾಗಿ ನಿನಗೆ ಹೇಳಲಿಲ್ಲವೇ. ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ್ಯರಿಗೆ ದಾಸರಾಗಿರುವುದೇ ಮೇಲಲ್ಲವೇ” ಎಂದು ಹೇಳಿದರು.

ನಮಗೆ ಗುರಾಣಿಯಂತಿರುವ ನಮ್ಮ ಅರಸನು ಯೆಹೋವನೇ; ಅವನು ಇಸ್ರಾಯೇಲರ ಸದಮಲಸ್ವಾಮಿಯ, ಸ್ವಕೀಯನು.

ಅಲ್ಲಿರುವ ನಜರೇತೆಂಬ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನು ನಜರೇತಿನವನೆಂದು ಕರೆಯಲ್ಪಡುವನು” ಎಂಬುದಾಗಿ ಪ್ರವಾದಿಗಳು ಹೇಳಿರುವ ಮಾತು ನೆರವೇರಿತು.

ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ ನನ್ನನ್ನು ಹಿಂಸಿಸಬೇಡ ಎಂದು ನಿನ್ನನ್ನು ನಾನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು.

ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯ ಉಂಟಾದದ್ದರಿಂದ ಅವರು ಆತನನ್ನು, ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು.

ನೀನು ದೇವರಿಂದ ಬಂದ ಅತಿಪರಿಶುದ್ಧನೆಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ” ಎಂದನು.

ನೀವು ಪರಿಶುದ್ಧನೂ, ನೀತಿವಂತನೂ ಆಗಿರುವ ಯೇಸುವನ್ನು ಬೇಡವೆಂದು ಹೇಳಿ ಕೊಲೆಗಾರನಾದ ಒಬ್ಬನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವದಾಯಕನಾದ ಕ್ರಿಸ್ತನನ್ನು ಕೊಲ್ಲಿಸಿದ್ದೀರಿ.

¶ “ಈ ಮನುಷ್ಯನನು ‘ಹಾನಿಕರವೂ ಲೋಕದ ಎಲ್ಲೆಡೆ ಇರುವ, ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ, ನಜರೇನ ಎಂಬ ಪಂಥದ ನಾಯಕ ಎಂತಲೂ ಕಂಡೆವು.’

¶ ‹“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ,›‹ಪರಿಶುದ್ಧನೂ,›‹ಸತ್ಯವಂತನೂ,›‹ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ,›‹ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,›