TSK

TSK · ಮಾರ್ಕನು 1:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ದೆವ್ವ ಹಿಡಿದ ಕುರುಡನೂ, ಮೂಕನೂ ಆಗಿರುವ ಒಬ್ಬನನ್ನು ಯೇಸುವಿನ ಬಳಿಗೆ ಕರೆತಂದರು. ಆತನು ಅವನನ್ನು ಸ್ವಸ್ಥಮಾಡಲು ಆ ಮೂಕನಿಗೆ ಮಾತು ಹಾಗೂ ದೃಷ್ಟಿ ಎರಡೂ ಬಂದವು.

ಅವರು ಅತ್ಯಂತ ಆಶ್ಚರ್ಯಪಟ್ಟು, “ಆತನು ಎಲ್ಲವನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾನೆ” ಎಂದು ಅಂದುಕೊಂಡರು.

¶ ಅವರು ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿರುವಾಗ ಯೇಸು ಅವರೆಲ್ಲರಿಗಿಂತ ಮುಂದಾಗಿ ನಡೆದುಹೋದದ್ದರಿಂದ ಶಿಷ್ಯರು ಆಶ್ಚರ್ಯಪಟ್ಟರು. ಆತನನ್ನು ಹಿಂಬಾಲಿಸುವವರು ಭಯಪಟ್ಟರು. ಆಗ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಪುನಃ ಕರೆದುಕೊಂಡು ಮುಂದೆ ತನಗೆ ಸಂಭವಿಸುವ ಸಂಗತಿಯನ್ನು ಹೇಳುವುದಕ್ಕೆ ಪ್ರಾರಂಭಿಸಿದನು;

¶ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಮತ್ತು ಅಧಿಕಾರಗಳನ್ನು ಕೊಟ್ಟು,