ಕೀರ್ತನೆಗಳು 33:9
TSK
ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.
TSK
Treasury of Scripture Knowledge references in ಕನ್ನಡ IRV.
ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.
ಆತನು ಎದ್ದು ಗಾಳಿಯನ್ನು ಗದರಿಸಿ, ಸಮುದ್ರಕ್ಕೆ ‹“ಶಾಂತವಾಗಿರು, ಮೊರೆಯಬೇಡ”› ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು.
ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ನೋಡಿ ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದನು.
ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.