TSK

TSK · ಮಾರ್ಕನು 1:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನನ್ನ ಗದರಿಕೆಗೆ ಲಕ್ಷ್ಯಕೊಡಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.

ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.

ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ನಿಮ್ಮ ಪುತ್ರಪುತ್ರಿಯರು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು. ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು.

‹ಏಕೆಂದರೆ, ಯೋಹಾನನಂತೂ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತಿದ್ದನು ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನವಾಗುವುದು”› ಎಂದು ಅಪ್ಪಣೆ ಕೊಟ್ಟನು.

“ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು, ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;

¶ ನಾನು ಮಾತನಾಡುವುದಕ್ಕೆ ಪ್ರಾರಂಭಿಸಿದಾಗ, ಪವಿತ್ರಾತ್ಮವು ಮೊದಲು ನಮ್ಮ ಮೇಲೆ ಇಳಿದಂತೆ ಅವರ ಮೇಲೆಯೂ ಇಳಿಯಿತು.

ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು. ಒಂದೇ ಆತ್ಮವು ನಮ್ಮೆಲ್ಲರಿಗೆ ಪಾನವಾಗಿ ಕೊಡಲ್ಪಟ್ಟಿತು.